ಸಾಮಾಜಿಕ,ಶೈಕ್ಷಣಿಕ ಸಮೀಕ್ಷೆ:ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

Oct 7, 2025 - 17:33
 0  185
ಸಾಮಾಜಿಕ,ಶೈಕ್ಷಣಿಕ ಸಮೀಕ್ಷೆ:ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

ಬೆಂಗಳೂರು:ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಪರಿಶೀಲನೆ ಸಭೆ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆಯಿತು. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರ ಅಧ್ಯಕ್ಷತೆಯಲ್ಲಿ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ರವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು, ಸರಕಾರದ ಅಧೀನ ಕಾರ್ಯದರ್ಶಿಗಳು, ಹಿಂದುಳಿದ ವರ್ಗಗಳ ಅಧ್ಯಕ್ಷರು, ಇಲಾಖೆಯ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0