ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಚಾಲನೆ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಚಾಲನೆ

ಮಡಿಕೇರಿ :-ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ನಗರದ ಗೌಳಿ ಬೀದಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸೋಮವಾರ ಚಾಲನೆ ನೀಡಿದರು. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಜಿಲ್ಲೆಯ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆ ಸೋಮವಾರದಿಂದ ಆರಂಭವಾಗಿದ್ದು, ಆ ನಿಟ್ಟಿನಲ್ಲಿ ಸಮೀಕ್ಷೆಗೆ ಚಾಲನೆ ನೀಡಿದರು.

 ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಶಾಸಕರಾದ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ದೀಪಕ್, ತಹಶೀಲ್ದಾರ್ ಶ್ರೀಧರ, ಸಮೀಕ್ಷೆದಾರರು ಇತರರು ಇದ್ದರು . ನಾಡಿನ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ.

 ಈ ಉದ್ದೇಶವನ್ನು ಈಡೇರಿಸಲು, ಅರ್ಹ ಹಿಂದುಳಿದ ವರ್ಗಗಳನ್ನು ನಿಖರವಾಗಿ ಗುರುತಿಸಿ, ಸರ್ಕಾರದ ಸೌಲಭ್ಯವನ್ನು ಸಮಪರ್ಕವಾಗಿ ತಲುಪಿಸಲು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿ ನಿಖರವಾದ ಮಾಹಿತಿ ಸಂಗ್ರಹಿಸುವುದು ಬಹಳ ಮುಖ್ಯ. ಆ ನಿಟ್ಟಿನಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.