ಮುಖ್ಯಮಂತ್ರಿ ನೇತೃತ್ವದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ವ ಸಭೆ:ಎಎಸ್ ಪೊನ್ನಣ್ಣ ಭಾಗಿ

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತಾದ ಪೂರ್ವಭಾವಿ ಸಭೆ ನಡೆಸಿ, ಸಮೀಕ್ಷೆಯ ರೂಪುರೇಷೆಗಳನ್ನು ಸುದೀರ್ಘವಾಗಿ ಚರ್ಚಿಸಿ, ಪ್ರಮುಖ ಸೂಚನೆಗಳನ್ನು ನೀಡಿದ್ದೇನೆ ಎಂದು ಸಿ.ಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಹಿಂದುಳಿದ ವರ್ಗಗಳ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಮಧುಸೂಧನ ಆರ್ ನಾಯ್ಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ||ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.