ಸಮಾಜ ಸೇವಕ ಮೂಕೊಂಡ ವಿಜು ಸುಬ್ರಮಣಿ ಅವರಿಗೆ ಕಾವೇರಿ ರತ್ನ ಪ್ರಶಸ್ತಿ ಪ್ರದಾನ

ಸಮಾಜ ಸೇವಕ ಮೂಕೊಂಡ ವಿಜು ಸುಬ್ರಮಣಿ ಅವರಿಗೆ ಕಾವೇರಿ ರತ್ನ ಪ್ರಶಸ್ತಿ ಪ್ರದಾನ

ಸಿದ್ದಾಪುರ :ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟ ಗ್ರಾಮದ ಸಮಾಜ ಸೇವಕ ಮೂಕೊಂಡ ವಿಜು ಸುಬ್ರಮಣಿ ಆವರಿಗೆ ಕಾವೇರಿ ರತ್ನ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ, ಕುಶಾಲನಗರ ಪ್ರೆಸ್ ಕ್ಲಬ್ ಟ್ರಸ್ಟ್, ಸಂಗಮ ಟಿ.ವಿ., ವಂಶಿ ನ್ಯೂಸ್ ಹಾಗೂ ರಾಷ್ಟ್ರೀಯ ಅಪರಾದ ತಡೆ ಮತ್ತು ಮಾನವ ಹಕ್ಕುಗಳ ಭಾರತ ಪರಿಷತ್ ಬೆಂಗಳೂರು ಇವರ ಸಹಯೋಗದೊಂದಿಗೆ ನಡೆದ ಅಂತರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ನೀಡಲಾಗುವ ಕಾವೇರಿ ರತ್ನ ಪ್ರಶಸ್ತಿಯನ್ನ ಮಾಜಿ ಜಿಲ್ಲಾ ಪಂಚಾಯಿತಿ ಸಾಮಾಜಿಕ ಸ್ಥಾಯಿ ಸಮಿತಿಯ ಅಧ್ಯಕ್ಷ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲೂ ಸುದೀರ್ಘ ಸೇವೆ ಸಲ್ಲಿಸುತ್ತಿದ್ದು ಆರೋಗ್ಯ, ಶಿಕ್ಷಣ, ಕ್ರೀಡೆ ,ಪರಿಸರ, ಸಾಮಾಜಿಕ ಕಳಕಳಿ, ಸಮಾಜ ಸೇವೆಯಲ್ಲಿ ಗುರುತಿಸಿಕೊಂಡು ಸಂಕಷ್ಟದಲ್ಲಿರುವವರಿಗೆ ನೆರವಾಗುವ ಮೂಲಕ ಆರೋಗ್ಯ ಮತ್ತು ಶೈಕ್ಷಣಿಕ ಕ್ಷೇತ್ರಕ್ಕೆ ನೆರವು ನೀಡುವ ಮೂಲಕ ಉದಾರ ದಾನಿ ಎಂದೆ ಹೆಸರುವಾಸಿಯಾಗಿರುವ ಮೂಕೊಂಡ ವಿಜು ಸುಬ್ರಮಣಿ ಅವರ ಸಮಾಜ ಸೇವೆ ಪರಿಸರ ಕಾಳಜಿಗಾಗಿ ರಾಜ್ಯ ಮಟ್ಟದ ಪರಿಸರ ಮಿತ್ರ ಮತ್ತು ಸಮಾಜ ಸೇವಾ ಸಾಧನೆ ಪ್ರಶಸ್ತಿ, ಸುವರ್ಣ ಕರ್ನಾಟಕ ರಾಜ್ಯ ಪ್ರಶಸ್ತಿ ಸೇರಿದಂತೆ ಇದೀಗ ಕಾವೇರಿ ರತ್ನ ಪ್ರಶಸ್ತಿ ಪಡೆದುಕೊಂಡಿದ್ದಾರೆ.