Kodagu

ಸೋಮವಾರಪೇಟೆ ತಾಲ್ಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಸೋಮಯ್ಯ ಆಯ್ಕೆ

admincoorgdaily

ಸೋಮವಾರಪೇಟೆ ತಾಲ್ಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಸೋಮಯ್ಯ ಆಯ್ಕೆ

ಕುಶಾಲನಗರ: ಸೋಮವಾರಪೇಟೆ ತಾಲ್ಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ಏಳನೇ ಹೊಸಕೋಟೆ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಸೋಮಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಸೋಮವಾರಪೇಟೆ ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆಯಲ್ಲಿ ಸಂಘದ ನೂತನ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಮಂಡಳಿಯನ್ನು ರಚಿಸಲಾಯಿತು. ಸಂಘದ ಹಿಂದಿನ ಸಂಘದ ಉಪಾಧ್ಯಕ್ಷೆ ಕೆ.ಇಂದಿರಾ ಅವರ ಅಧ್ಯಕ್ಷತೆಯಲ್ಲಿ ಈ ಆಯ್ಕೆ ನಡೆಯಿತು.

ಸಂಘದ ಉಪಾಧ್ಯಕ್ಷರಾಗಿ ಕೊಡಗರಹಳ್ಳಿ ಸುಂಟಿಕೊಪ್ಪನಾಡು ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಕೆ.ಇಂದಿರಾ, ಕಾರ್ಯದರ್ಶಿಯಾಗಿ ಗೋಣಿಮರೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಚ್.ಬಿ. ತಳವಾರ್, ಖಜಾಂಚಿಯಾಗಿ ಕೂಡ್ಲೂರು ಯೂನಿಕ್ ಅಕಾಡೆಮಿ ಶಾಲೆಯ ಮುಖ್ಯ ಶಿಕ್ಷಕ ಬಿ.ಆರ್.ಮಹೇಶ್ ಆಯ್ಕೆಯಾಗಿದ್ದಾರೆ.

 ಸಂಘದ ನಿರ್ದೇಶಕರಾಗಿ ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಪೆರುಮಾಳ್ , ಆಲೂರು ಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಕೆ.ಪ್ರಕಾಶ್ , ಐಗೂರು ಸರ್ಕಾರಿ ಪಿಯೂ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ಶಿಕ್ಷಕ ಯಶವಂತ್ ಕುಮಾರ್ , ಹಂಡ್ಲಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಂ.ಎಚ್. ಹರೀಶ್ , ನಂಜರಾಯಪಟ್ಟಣ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಚ್.ಬಿ. ಮೂರ್ತಿ , ಶನಿವಾರಸಂತೆ ಶ್ರೀ ವಿಘ್ನೇಶ್ವರ ಬಾಲಿಕಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ವಿ.ಸುಚಿತ್ರ , ಕುಶಾಲನಗರ ಜ್ಞಾನಭಾರತಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ತ್ರಿವೇಣಿ , ಕಿರಿಕೊಡ್ಲಿ ಎಸ್.ಕೆ.ಎಸ್.ಪ್ರೌಢಶಾಲೆಯ ಮುಖ್ಯ ಶಿಕ್ಷಕ ಅಭಿಲಾಷ್ ಹಾಗೂ ಕುಶಾಲನಗರ ಫಾತಿಮ ಕಾನ್ವೆಂಟ್ ಶಾಲೆಯ ಮುಖ್ಯ ಶಿಕ್ಷಕಿ ಉಷಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

 ಕರ್ನಾಟಕ ರಾಜ್ಯ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಜಿಲ್ಲಾಧ್ಯಕ್ಷ ಹ್ಯಾರಿ ಮೊರಸ್ ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು. ಸಂಘದ ನೂತನ ಅಧ್ಯಕ್ಷ ಸೋಮಯ್ಯ ಮಾತನಾಡಿ, ಶಿಕ್ಷಣ ಇಲಾಖೆಯ ಹೊಸ ಪರೀಕ್ಷಾ ಪದ್ಧತಿ ಹಾಗೂ ನಿರ್ದೇಶನದಂತೆ ಶಾಲಾ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾಗಿ ಶೈಕ್ಷಣಿಕ ಕಾರ್ಯಕ್ರಮಗಳನ್ನು ಸಂಘಟಿಸುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಲಾಗುವುದು ಎಂದರು.

ಸಭೆಯಲ್ಲಿ ಲೆಕ್ಕಪತ್ರ ಮಂಡನೆ ಮಾಡಲಾಯಿತು. ಕೆ.ಪ್ರಕಾಶ್ ಸ್ವಾಗತಿಸಿದರು. ಪೆರುಮಾಳ್ ವಂದಿಸಿದರು. ನೂತನ ಕಾರ್ಯಕಾರಿ ಮಂಡಳಿ ಸಭೆ ಕರೆದು ಮುಂದಿನ ಕಾರ್ಯ ಚಟುವಟಿಕೆಗಳ ಕುರಿತು ಚರ್ಚಿಸುವಂತೆ ತೀರ್ಮಾನಿಸಲಾಯಿತು.