ಸೋಮವಾರಪೇಟೆ: ಸರ್ಕಾರಿ ಆಸ್ಪತ್ರೆಯಲ್ಲಿ ಮೂಳೆ ವೈದ್ಯರು ಮತ್ತು ಅರವಳಿಕೆ ತಜ್ಞರನ್ನು ಖಾಯಂ ಆಗಿ ನೇಮಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯ

Jul 24, 2026 - 14:22
 0  60
ಸೋಮವಾರಪೇಟೆ: ಸರ್ಕಾರಿ ಆಸ್ಪತ್ರೆಯಲ್ಲಿ ಮೂಳೆ ವೈದ್ಯರು ಮತ್ತು ಅರವಳಿಕೆ ತಜ್ಞರನ್ನು ಖಾಯಂ ಆಗಿ ನೇಮಿಸುವಂತೆ  ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯ

ಸೋಮಮವಾರಪೇಟೆ: ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೂಳೆ ವೈದ್ಯರು ಮತ್ತು ಅರವಳಿಕೆ ತಜ್ಞರನ್ನು ಖಾಯಂ ಆಗಿ ನೇಮಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಬುಧವಾರ ಮನವಿ ಸಲ್ಲಿಸಿತು. ಆಸ್ಪತ್ರೆಗೆ ತೆರಳಿದ ಪದಾಧಿಕಾರಿಗಳು ಆಡಳಿತ ವೈದ್ಯಾಧಿಕಾರಿಯೊಂದಿಗೆ ಚರ್ಚೆ ನಡೆಸಿದರು.

 ವೇದಿಕೆ ಜಿಲ್ಲಾಧ್ಯಕ್ಷ ಕೆ.ಎನ್. ದೀಪಕ್ ಮಾತನಾಡಿ, ಈ ಆಸ್ಪತ್ರೆಯನ್ನು ಗುಡ್ಡಗಾಡು ಮತ್ತು ಗ್ರಾಮೀಣ ಪ್ರದೇಶಗಳ ಜನರು ಆಶ್ರಯಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ರೈತರು, ಬಡವರು ಮತ್ತು ಕೂಲಿ ಕಾರ್ಮಿಕರು ಈ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುತ್ತಾರೆ. ಕಾರ್ಮಿಕರು ಮರದಿಂದ ಬಿದ್ದು ಗಾಯಗೊಳ್ಳುತ್ತಾರೆ. ಆಕಸ್ಮಿಕ ಅಪಘಾತಗಳು ಸೇರಿದಂತೆ ನಾನಾ ರೀತಿಯ ಅವಘಡಗಳಿಗೀಡಾಗಿ, ಆಸ್ಪತ್ರೆಗೆ ಬಂದಂತಹ ಸಂದರ್ಭದಲ್ಲಿ, ಮೂಳೆ ವೈದ್ಯರ ಸೂಕ್ತ ಸಮಯದಲ್ಲಿ ಸಿಗುವುದಿಲ್ಲ. ಮೂಳೆಗೆ ಸಂಬಂಧಿಸಿದ ಗಾಯಗಳಿಗೆ ಜಿಲ್ಲಾ ಆಸ್ಪತ್ರೆ ಮತ್ತು ಹೊರ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಿಗೆ ಕಳಿಸಲಾಗುತ್ತಿದೆ. ಇದ್ದರಿಂದ ಬಡವರಿಗೆ ಸಮಸ್ಯೆಯಾಗಿದೆ ಎಂದು ಹೇಳಿದರು.

ಆಸ್ಪತ್ರೆಯಲ್ಲಿ ಮೂಳೆ ವೈದ್ಯರು ಇದ್ದರೂ, ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ. ಆಸ್ಪತ್ರೆಗೆ ಕೂಡಲೇ ಖಾಯಂ ವೈದ್ಯರನ್ನು ನೇಮಿಸಿ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕಾಗಿದೆ. ಅಲ್ಲದೆ, ಅರವಳಿಕೆ ತಜ್ಞರು ವಾರಕ್ಕೆ ಎರಡು ದಿನ ಕರ್ತವ್ಯಕ್ಕೆ ಬರುತ್ತಿದ್ದು, ವಾರದ ಎಲ್ಲಾ ದಿನಗಳಲ್ಲೂ ಸದರಿ ಆಸ್ಪತ್ರೆಯಲ್ಲಿ ಕರ್ತವ್ಯಕ್ಕೆ ನೇಮಿಸಿ. ಶಸ್ತ್ರಚಿಕಿತ್ಸಕರಿಗೆ, ಹೆರಿಗೆ ಶಸ್ತ್ರಚಿಕಿತ್ಸೆ ಮತ್ತು ಇತರ ಸಂದರ್ಭಗಳಲ್ಲೂ ಅರವಳಿಕೆ ತಜ್ಞರ ಅಗತ್ಯವಿದೆ ಎಂದು ಹೇಳಿದರು.

ನಮ್ಮ ಬೇಡಿಕೆಯನ್ನು ಮುಂದಿನ 15 ದಿನಗಳಲ್ಲಿ ಈಡೇರಿಸದಿದ್ದಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆಯ ನೇತೃತ್ವದಲ್ಲಿ ನಗರದ ಪುಟ್ಟಪ್ಪ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸಂಬಂಧಿತ ಮನವಿಯನ್ನು ಆಸ್ಪತ್ರೆ ವೈದ್ಯಾಧಿಕಾರಿ ಜಮೀರ್ ಆಹಮದ್ ಮೂಲಕ ಆರೋಗ್ಯ ಸಚಿವರಿಗೆ ಸಲ್ಲಿಸಿದರು. ಈ ಸಂದರ್ಭ ಜಿಲ್ಲಾ ಯುವ ಘಟಕದ ಅಧ್ಯಕ್ಷ ವಸಂತ ಅಚಾರ್ಯ, ತಾಲ್ಲೂಕು ಘಟಕದ ಅಧ್ಯಕ್ಷ ಗಣೇಶ ಗೌಡ, ನಗರ ಘಟಕದ ಅಧ್ಯಕ್ಷ ಬಿ.ಎಸ್. ಮಂಜುನಾಥ್, ಕಾರ್ಯದರ್ಶಿ ಕೆ.ಪಿ. ರವೀಶ್, ಪ್ರಮುಖರಾದ ಶೇಖರ್ ತಾಕೇರಿ, ವೆಂಕಿ, ನಿತನ್, ಮೊಹಮ್ಮದ್ ಶಫೀ, ಇನಕನಹಳ್ಳಿ ಶಿವಣ್ಣ, ದೇವರಾಜ್ ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0