ಸೋಮವಾರಪೇಟೆ:10ನೇ ವರ್ಷದ ಆಟಿ ಸಂಭ್ರಮೋತ್ಸವ

ಸೋಮವಾರಪೇಟೆ:ಶ್ರೀ ನಾರಾಯಣ ಗುರು ಸೇವಾ ಸಮಿತಿ, ತುಳುನಾಡು ಬಿಲ್ಲವ ಮಹಿಳಾ ಸಂಘ ಸೋಮವಾರಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ 10ನೇ ವರ್ಷದ ಆಟಿ ಸಂಭ್ರಮೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ ನಾರಾಯಣ ಗುರು ಸೇವಾ ಸಮಿತಿಯಿಂದ ಪ್ರೋತ್ಸಾಹ ವಿತರಣಾ ಕಾರ್ಯಕ್ರಮವನ್ನು ಮಾಜಿ ಸಚಿವ ಎಂ. ಪಿ ಅಪ್ಪಚ್ಚು ರಂಜನ್ ಉದ್ಘಾಟನೆ ಮಾಡಿದರು.ನಿಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡ ಬೇಕು ಎಂದರು, ಕುಲ ಬಾಂದಧವರು ಸಂಘಟಕರಾಗ ಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೋಮವಾರಪೇಟೆ ತಾಲೂಕು ಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷರಾದ ಬಿ. ಆರ್. ಚಂದ್ರಹಾಸ ರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ,ಕೊಡಗು ಜಿಲ್ಲಾ ಬಿಲ್ಲವ ಸಂಘದ ಅಧ್ಯಕ್ಷ ಲಿಂಗಪ್ಪ ಪೂಜಾರಿ, ಪ್ರವಾಸಿ ಹಾಗೂ ಸಾಮಾಜಿಕ ಕಾರ್ಯಕರ್ತ ಪದ್ಮನಾಭ, ರಾಜ್ಯ ನಾರಾಯಣ ಗುರು ವಿಚಾರಣ ವೇದಿಕೆ ಅಧ್ಯಕ್ಷರಾದ ಸತ್ಯಜಿತ್ ಸುರತ್ಕಲ್ . ಕಾರ್ಯಕ್ರಮದ ವೇದಿಕೆಯಲ್ಲಿ ಗೌರವ ಸಲಹೆಗಾರ ಬಿ. ಎ. ಭಾಸ್ಕರ್, ಜನಕ್ಕಿ ಕನ್ವೆನ್ ಷನ್ ಹಾಲ್ ಮಾಲೀಕರಾದ ಬಿ. ಎಸ್. ಸುಂದರ್, ಸಫಾಲಿ ಬಾರ್ &ಪ್ಯಾಮಿಲಿ ರೆಸ್ಟೋರೆಂಟ್ ಮಾಲೀಕರಾದ ಬಿ. ಎಸ್ ಶ್ರೀಧರ್, ಅಲೋಕ ಬಾರ್ &ಪ್ಯಾಮಿಲಿ ರೆಸ್ಟೋರೆಂಟ್ ಮಾಲೀಕರಾದ ಕಾರ್ತಿಕ್ ಸದಾನಂದ್, , ತುಳುನಾಡ ಬಿಲ್ಲವ ಮಹಿಳಾ ಸಂಘದ ತಾಲೂಕು ಅಧ್ಯಕ್ಷೆ ಬೇಬಿ ಚಂದ್ರಹಾಸ, ಮೂಡಬಿದ್ರೆ ಆಳ್ವಾಸ್ ಕಾಲೇಜು ಉಪನ್ಯಾಸಕರಾದ ತೇಜಸ್, ಮೋಹನ್, ಕುಶಾಲನಗರ ತಾಲೂಕು ಕೋಟಿ ಚೆನ್ನಯ್ಯ ಬಿಲ್ಲವ ಸಮಾಜ ಅಧ್ಯಕ್ಷ ಸುಧೀರ್, ಸುಂಟಿಕೊಪ್ಪ ಬಿಲ್ಲವ ಸೇವಾ ಸಮಾಜ ಅಧ್ಯಕ್ಷ ಮಣಿ ಮುಖೇಶ್, ನಾಪೋಕ್ಲು ಬಿಲ್ಲವ ಸಂಘದ ಅಧ್ಯಕ್ಷ ಪ್ರದೀಪ್, ಸೋಮವಾರಪೇಟೆ ನಾರಾಯಣ ಗುರು ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ಇಂದಿರಾ ಮೊಣಪ್ಪ ಮುಂತಾದವರಿದ್ದರು. ಇದೇ ಸಂದರ್ಭದಲ್ಲಿ ಸಾಧನೆ ಮಾಡಿದ ಜನಾಂಗದ ವಿದ್ಯಾರ್ಥಿ ಸೃಜನ್ ಇವರನ್ನು ಸನ್ಮಾನಿಸಿದರು.