ಸೋಮವಾರಪೇಟೆ:ನಿಯಂತ್ರಣ ತಪ್ಪಿ ಬೈಕ್ ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಸ್ಥಳದಲ್ಲೇ ಮೃತಪಟ್ಟ ಬೈಕ್ ಸವಾರ

Feb 14, 2026 - 16:44
 0  1.6k
ಸೋಮವಾರಪೇಟೆ:ನಿಯಂತ್ರಣ ತಪ್ಪಿ ಬೈಕ್ ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಸ್ಥಳದಲ್ಲೇ ಮೃತಪಟ್ಟ ಬೈಕ್ ಸವಾರ
ಮೃತಪಟ್ಟ ವ್ಯಕ್ತಿ

ಸೋಮವಾರಪೇಟೆ;ನಿಯಂತ್ರಣ ತಪ್ಪಿದ ಬೈಕ್ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಗಾಯಗೊಂಡ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಸೋಮವಾರಪೇಟೆ ಸಮೀಪದ ಕೂತಿ ಗ್ರಾಮದ ಸಿ.ಜೆ. ಸಂದೀಪ್ (41) ಮೃತ ದುರ್ದೈವಿ. ಕಾಫಿ ತೋಟದಲ್ಲಿ ಕೆಲಸ ಮುಗಿಸಿ ದೊಡ್ಡ ತೋಳುರು ಗ್ರಾಮದ ಪ್ರಸನ್ನರವರನ್ನು ಬಿಡಲು ಅವರ ಮನೆಗೆ ಸಂದೀಪ್ ತನ್ನ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ತೋಳುರುಶೆಟ್ಟಳ್ಳಿ ಸಮೀಪದ ಇನಕನಹಳ್ಳಿ ಬಳಿಯ ಮುಖ್ಯರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ನಿಯಂತ್ರಣ ಕಳೆದು ಕೊಂಡು ವಿದ್ಯುತ್‌ ಕಂಬಕ್ಕೆ ಅಪ್ಪಳಿಸಿದೆ.ಪರಿಣಾಮ ಸಂದೀಪ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹಿಂಬದಿ ಸವಾರ ಪ್ರಸನ್ನ ಅವರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಸಂಬಂಧ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 3
Wow Wow 0