ಸೋಮವಾರಪೇಟೆ: ಗೆಜ್ಜೆಹಣಕೋಡು ಗ್ರಾಮದ ಕಾಫಿ ತೋಟದಲ್ಲಿ ಚಿರತೆ ಹಿಡಿಯಲು ಬೋನ್ ಅಳವಡಿಕೆ

Feb 26, 2026 - 13:13
 0  701
ಸೋಮವಾರಪೇಟೆ: ಗೆಜ್ಜೆಹಣಕೋಡು ಗ್ರಾಮದ ಕಾಫಿ ತೋಟದಲ್ಲಿ ಚಿರತೆ ಹಿಡಿಯಲು ಬೋನ್  ಅಳವಡಿಕೆ

ಸೋಮವಾರಪೇಟೆ:ತಾಲೂಕಿನ ಗೆಜ್ಜೆಹಣಕೋಡು ಗ್ರಾಮದ ಮನೆಯ ಅಂಗಳದಲ್ಲೇ ಚಿರತೆ ಪ್ರತ್ಯಕ್ಷಗೊಂಡಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಮಂಗಳವಾರ ಸಂಜೆ 7.30 ರ ಸಮಯಕ್ಕೆ ಗ್ರಾಮದ ಉದಯ ಎಂಬವರ ಅಂಗಳದಲ್ಲಿ ಚಿರತೆ ಕಾಣಿಸಿಕೊಂಡಿದೆ.

ಅದನ್ನು ಕಂಡ ಗೃಹಿಣಿ ವಿದ್ಯಾ ಬೊಬ್ಬೆ ಹೊಡೆದ ಸಂದರ್ಭ ಪೊದೆಯೊಳಗೆ ಹೋಗಿದೆ. ಓಡುವ ಈ ದೃಶ್ಯ ಮನೆಯ ಮುಂಭಾಗದಲ್ಲಿದ್ದ ಸಿ.ಸಿ ಕ್ಯಾಮೆರಾ ಸೆರೆಯಾಗಿದೆ. ದನಕರುಗಳು ಕೊಟ್ಟಿಗೆಯಲ್ಲಿದ್ದು ಸಾಕು ಪ್ರಾಣಿಗಳಿಗೆ ತೊಂದರೆಯಾಗಿಲ್ಲ. ಸ್ಥಳಕ್ಕೆ ಆರ್‌ಎಫ್‌ಒ ಶೈಲೇಂದ್ರ ಕುಮಾರ್, ಡಿಆರ್‌ಎಫ್‌ಒ ಪ್ರಶಾಂತ್ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಗೆಜ್ಜೆ ಹಣಕೋಡು ಗ್ರಾಮದ ರಸ್ತೆ ಬದಿಯಲ್ಲಿ ಹಾಗು ಬೇಳೂರು ಶ್ರೀ ಮುರುಘಾರಾಜೇಂದ್ರ ಮಠದ ತೋಟದ ದಂಚಿನ ಅರಣ್ಯ ಭಾಗದಲ್ಲಿ ಚಿರತೆ ಹಿಡಿಯುವ ಬೋನು ಅಳವಡಿಸಲಾಗಿದೆ. ಕಳೆದ ಒಂದು ತಿಂಗಳಿನಿಂದ ಚಿರತೆ ಕಾಟ ಹೆಚ್ಚಾಗಿದೆ. ಇತ್ತೀಚೆಗೆ ಕಾರೆಕೊಪ್ಪ ಗ್ರಾಮದಲ್ಲಿ ನಾಯಿ ಮತ್ತು ಕರುವನ್ನು ಚಿರತೆ ಕಚ್ಚಿ ಗಾಯಗೊಳಿಸಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳನ್ನು ಚಿರತೆಯನ್ನು ಸೆರೆಹಿಡಿಯಲು ಹರಸಾಹಸ ಪಡುತ್ತಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 1
Sad Sad 1
Wow Wow 0