ಸೋಮವಾರಪೇಟೆ: ಕಾಂಗ್ರೆಸ್ SIR ಸಭೆ - BLAಗಳಿಗೆ ID ಕಾರ್ಡ್ ವಿತರಣೆ:ಮತದಾರರಿಗೆ ತೊಂದರೆಯಾಗದಂತೆ ಕೆಲಸ ಮಾಡಿ: ಶಾಸಕ ಡಾ. ಮಂತರ್ ಗೌಡ
admincoorgdaily

ಸೋಮವಾರಪೇಟೆ: ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ SIR ವಿಶೇಷ ಸಭೆ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾನ್ಯ ಶಾಸಕರಾದ ಡಾ. ಮಂತರ್ ಗೌಡ ಅವರು ಪಕ್ಷದಿಂದ ನೇಮಿಸಲ್ಪಟ್ಟ ಎಲ್ಲಾ ಬೂತ್ ಮಟ್ಟದ BLAಗಳಿಗೆ ID ಕಾರ್ಡ್ ವಿತರಿಸಿದರು. SIR ಪ್ರಕ್ರಿಯೆಯ ಬಗ್ಗೆ BLAಗಳಿಗೆ ಮಾಹಿತಿ ನೀಡಿದ ಅವರು, BLOಗಳೊಂದಿಗೆ ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು.
ಈ SIR ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ವಾರ್ ರೂಮ್‌ಗಳನ್ನು ತೆರೆಯಲಾಗಿದೆ. BLAಗಳು ಮತದಾರರನ್ನು ಭೇಟಿ ಮಾಡುವಾಗ SIR ಪ್ರಕ್ರಿಯೆಯಲ್ಲಿ ಯಾವುದೇ ಲೋಪದೋಷ ಕಂಡುಬಂದಲ್ಲಿ ವಾರ್ ರೂಮ್ ಸಂಪರ್ಕಿಸಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು ಎಂದು ತಿಳಿಸಿದರು.
ಮತದಾರರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನಮ್ಮ ಪಕ್ಷದ ಕಾರ್ಯಕರ್ತರು ಕಾರ್ಯನಿರ್ವಹಿಸಲಿದ್ದಾರೆ ಎಂದು ಶಾಸಕರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಪ್ರಚಾರ ಸಮಿತಿ ಅಧ್ಯಕ್ಷ ಲಾರೆನ್ಸ್, ಕಾರ್ಯದರ್ಶಿ ಸುನಿಲ್ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.