ಸೋಮವಾರಪೇಟೆ: ತೇಗದ ಮರಗಳನ್ನು ಕಡಿದು ಸಾಗಾಟ, ಓರ್ವನ ಬಂಧನ, ಐವರು ಪರಾರಿ

Dec 18, 2025 - 12:32
Dec 18, 2025 - 13:10
 0  1.3k
ಸೋಮವಾರಪೇಟೆ: ತೇಗದ ಮರಗಳನ್ನು ಕಡಿದು ಸಾಗಾಟ, ಓರ್ವನ ಬಂಧನ, ಐವರು ಪರಾರಿ

ಸೋಮವಾರಪೇಟೆ:ಮೀಸಲು ಅರಣ್ಯದಲ್ಲಿ ತೇಗ ಸೇರಿದಂತೆ ಬೆಲೆಬಾಳುವ ಮರಗಳನ್ನು ಕಡಿದು ಸಾಗಿಸುತ್ತಿದ್ದ ಮರಗಳ್ಳರ ತಂಡವನ್ನು ಪತ್ತೆಹಚ್ಚುವಲ್ಲಿ ಸೋಮವಾರಪೇಟೆ ವಲಯ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಸೋವವಾರಪೇಟೆ ವಲಯದ ಹುದುಗೂರು ಶಾಖಾ ವ್ಯಾಪ್ತಿಯ ಐಗೂರು ಗ್ರಾಮದ ಕಾಜೂರು ಅರಣ್ಯ ಪ್ರದೇಶದಲ್ಲಿ ತೇಗದ ಮರಗಳನ್ನು ಕಡಿದು ನಾಟಗಳಾನ್ನಾಗಿ ಪರಿವರ್ತಿಸಿ ಶಾ ಮಿಲ್‌ಗೆ ಸಾಗಿಸಲು ಬೊಲೆರೋ ಪಿಕಪ್ ವಾಹನಕ್ಕೆ ತುಂಬಿಸುತ್ತಿದ್ದ ಸಂದರ್ಭ ಅರಣ್ಯ ಅಧಿಕಾರಿಗಳು ಈಚಗೆ ದಾಳಿ ನಡೆಸಿದ್ದಾರೆ.

ಅರೋಪಿಗಳು ಅರಣ್ಯ ಸಿಬ್ಬಂದಿಗಳ ಮೇಲೆ ದಾಳಿಗೆ ಪ್ರಯತ್ನಿಸಿದ ಸಂದರ್ಭ, ಆತ್ಮರಕ್ಷಣೆಗಾಗಿ ಸಿಬ್ಬಂದಿಗಳು ಗುಂಡು ಹಾರಿಸಿದ್ದಾರೆ. ಎಡವಾರೆ ಗ್ರಾಮದ ಬಿ.ಜೆ.ಸಂತೋಷ್ ಎಂಬ ಆರೋಪಿಯನ್ನು ಸ್ಥಳದಲ್ಲೇ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅರೋಪಿಗಳಾದ ಎಡವಾರೆ ಗ್ರಾಮದ ಬಿ.ಆರ್.ಆಶ್ವಥ್, ಬಿ.ವಿ.ನಿತೀನ್, ಕೊಡ್ಲಿಪೇಟೆ ಅರಕನಹಳ್ಳಿಯ ಸಯ್ಯದ್ ಜಹೀರ್, ಕುಶಾಲನಗರ ರಸಲ್‌ಪುರದ ವಿ.ಎಂ.ಷರೀಪ್, ಐಗೂರು ಗ್ರಾಮದ ಅಕ್ಷಯ್ ನಾಪತ್ತೆಯಾಗಿದ್ದಾರೆ. ವಾಹನ ಸಮೇತ ತೇಗದ ನಾಟಗಳನ್ನು ವಶಪಡಿಸಿಕೊಳ್ಳಲಾಗಿದೆ. 

ತಲೆಮರೆಸಿಕೊಂಡಿರುವ ಅರೋಪಿಗಳನ್ನು ಬಂಧಿಸಲು ಆರ್‌ಎಫ್‌ಒ ಶೈಲೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿದೆ. ಬಂಧಿತ ಅರೋಪಿಗೆ ನ್ಯಾಯಾಲಯದಿಂದ ಜಾಮೀನು ದೊರೆತ್ತಿದೆ.

ಬುಧವಾರ ಘಟನಾ ಸ್ಥಳಕ್ಕೆ ಸಿಸಿಎಫ್ ಸೋನಾಲ್, ಡಿಎಫ್‌ಒ ಅಭಿಷೇಕ್, ಎಸಿಎಫ್ ಎ.ಎ.ಗೋಪಾಲ್, ಅರಣ್ಯ ಸಂಚಾರಿ ದಳದ ಎಸಿಎಫ್ ಗಾನಶ್ರೀ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಾರ್ಯಚರಣೆಯಲ್ಲಿ ಆರ್‌ಎಫ್‌ಒ ಶೈಲೇಂದ್ರ ಕುಮಾರ್, ಡಿಆರ್‌ಎಫ್‌ಓ ಚಂದ್ರೇಶ್, ಸಿಬ್ಬಂದಿಗಳಾದ ಚಂದ್ರಶೇಖರ್, ರವಿ ಕುಮಾರ್, ಅಂತೋಣಿ, ದಿವಾಕರ್, ಸಚಿನ್, ಅಯ್ಯಪ್ಪ, ಜೀವನ್, ಪ್ರಜ್ವಲ್, ಆನೆ ಕಾರ್ಯಪಡೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0