ಸೋಮವಾರಪೇಟೆ: ಅಕ್ರಮ ಗೋ ಸಾಗಾಟ: ವಾಹನ ಸಹಿತ,ಆರೋಪಿ ವಶಕ್ಕೆ
ಸೋಮವಾರಪೇಟೆ: ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ನೀಡಿದ ಖಚಿತ ಮಾಹಿತಿಯನ್ನಾಧರಿಸಿ ಸೋಮವಾರಪೇಟೆ ಪೋಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಎರಡು ಗೋವುಗಳು ಸೇರಿದಂತೆ ವಾಹನ ಸಹಿತ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ಪಟ್ಟಣದ ಆಲೇಕಟ್ಟೆ ಜಂಕ್ಷನ್ ಬಳಿ ಮಾಂಸಕ್ಕಾಗಿ ಅಕ್ರಮವಾಗಿ ಎರಡು ಗೋವುಗಳನ್ನು ಪಿಕ್ ವಾಹನ (KA 12 C 0292) ರಲ್ಲಿ ಸಾಗಾಟ ಮಾಡುತ್ತಿದ್ದ ಆರೋಪಿ, ಗರ್ವಾಲೆ ಗ್ರಾಮದ ಬೆಳ್ಳಿಯಪ್ಪ ಎಂಬಾತನನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. ಬೆಳ್ಳಿಯಪ್ಪನ ವಿರುದ್ಧ ಮೊಕದ್ದಮೆ ದಾಖಲಿಸಿಕೊಂಡ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ರಕ್ಷಿಸಲ್ಪಟ್ಟ ಗೋವುಗಳನ್ನು ಮೈಸೂರಿನ ಗೋ ಶಾಲೆಗೆ ಸಾಗಿಸಲಾಗಿದೆ.
