ಸೋಮವಾರಪೇಟೆ: ರಾಷ್ಟ್ರೀಯ ಪೋಷಣ್ ಅಭಿಯಾನ ಕಾರ್ಯಕ್ರಮ

ಸೋಮವಾರಪೇಟೆ: ಕಾಗಡಿಕಟ್ಟೆ ಆರೋಗ್ಯ ಉಪಕೇಂದ್ರದಲ್ಲಿ ಗುರುವಾರ ನಡೆದ ರಾಷ್ಟ್ರೀಯ ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋಪಾಲಕೃಷ್ಣ ಉದ್ಘಾಟಿಸಿದರು.
ನಂತರ ಅವರು ಮಾತನಾಡಿ, ಸರ್ಕಾರ ಗರ್ಭಿಣಿಯರಿಗೆ ಅನೇಕ ಸವಲತ್ತುಗಳನ್ನು ನೀಡುತ್ತಿದೆ. ಅವುಗಳನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು. ಅಪೌಷ್ಟಿಕತೆ ತಡೆಗಟ್ಟುವುದು, ರಕ್ತಹೀನತೆ ನಿವಾರಣೆ, ಸೀಮಂತ, ಅನ್ನಪ್ರಾಶನ ಮತ್ತು ಪೋಷಣಾ ಅಭಿಯಾನದ ಬಗ್ಗೆ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ದಿವ್ಯ ತಿಳಿಸಿದರು. ಪಂಚಾಯಿತಿ ಉಪಾಧ್ಯಕ್ಷೆ ರಶೀದ, ಪಿಡಿಒ ಸ್ಮಿತಾ, ಅಂಗನವಾಡಿ ಕಾರ್ಯಕರ್ತೆಯರಾದ ಸವಿತಾ, ಪೂರ್ಣಿಮ, ಸಿಬ್ಬಂದಿಗಳಾದ ಮಧುಸೂದನ್, ವಿಶ್ವರೂಪಚಾರ್ಯ ಇದ್ದರು.