ಸೋಮವಾರಪೇಟೆ:ತಾಲೂಕು ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆ
ಸೋಮವಾರಪೇಟೆ:80ನೇ ಸ್ವಾತಂತ್ರ್ಯ ದಿನವನ್ನು ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಹೇಳಿದರು.
ತಾಲೂಕು ಕಚೇರಿಯಲ್ಲಿ ಶುಕ್ರವಾರ ನಡೆದ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎಲ್ಲಾ ಸರ್ಕಾರಿ ಅಧಿಕಾರಿಗಳು ಕಡ್ದಾಯವಾಗಿ ಸಮಾರಂಭದಲ್ಲಿ ಭಾಗವಹಿಸಬೇಕು. ಬೆಳಿಗ್ಗೆ 9 ಗಂಟೆಗೆ ವಿದ್ಯಾರ್ಥಿಗಳೊಂದಿಗೆ ಎಲ್ಲರೂ ಶಾಲಾ ಆವರಣದಲ್ಲಿ ಸೇರಬೇಕು. ಬೆಳಿಗ್ಗೆ 9.30 ಗಂಟೆಗೆ ಧ್ವಜಾರೋಹಣ ನಡೆಯಲಿದೆ. ನಂತರ ಸ್ವಾತಂತ್ರ್ಯ ದಿನದ ಮಹತ್ವದ ಬಗ್ಗೆ ಸಂದೇಶ ನೀಡಲಾಗುತ್ತದೆ. ಮಳೆ ಇಲ್ಲದಿದ್ದರೆ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಹೇಳಿದರು. ರಾಷ್ಟ್ರಗೀತೆ, ವಂದೇ ಮಾತರಂ, ದೇಶ ಭಕ್ತಿಗೀತೆ, ಧ್ವಜಾಗೀತೆಯನ್ನು ವಿದ್ಯಾರ್ಥಿಗಳು ಹಾಡಲಿದ್ದಾರೆ.
ಮಾಜಿ ಸೈನಿಕರು ಮತ್ತು ವಿವಿಧ ಇಲಾಖೆಯ ಅಯ್ದ ಸಿಬ್ಬಂದಿಗಳನ್ನು ಸನ್ಮಾನಿಸಲಾಗುತ್ತದೆ. ಸಭೆಯಲ್ಲಿ ಸಮಿತಿಯ ಸದಸ್ಯರಾದ ತೇಲಪಂಡ ಕವನ್ ಕಾರ್ಯಪ್ಪ, ನಂದಕುಮಾರ್, ಎಸ್.ಡಿ.ವಿಜೇತ್ ಮತ್ತು ವಿವಿಧ ಇಲಾಖಾಧಿಕಾರಿಗಳು ಇದ್ದರು.
What's Your Reaction?
Like
0
Dislike
0
Love
1
Funny
0
Angry
0
Sad
0
Wow
0
