ಸೋಮವಾರಪೇಟೆ:ತಾಲೂಕಿನ ಐಗೂರು ಸರಕಾರಿ ಪ್ರೌಢಶಾಲೆಯಲ್ಲಿ 2026-27ನೇ ಸಾಲಿನ ಶಾಲಾ ಸಂಸತ್ ಚುನಾವಣೆ
ಸೋಮವಾರಪೇಟೆ: ತಾಲೂಕಿನ ಐಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಮತದಾರರ ಸಾಕ್ಷರತಾ ಕ್ಲಬ್ ವತಿಯಿಂದ 2026-27ನೇ ಸಾಲಿನ ಶಾಲಾ ಸಂಸತ್ ಚುನಾವಣೆಯನ್ನು ಈಚೆಗೆ ನಡೆಸಲಾಯಿತು. ಈ ಪ್ರಕ್ರಿಯೆಯಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ನಂತರ ಚುನಾವಣೆಯಲ್ಲಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕರಾದ ಎಂ.ಎ.ಯಶ್ವಂತ್ ಕುಮಾರ್ ಮಾತನಾಡಿ, ವಿದ್ಯಾರ್ಥಿ ದೆಸೆಯಿಂದಲೇ ಈ ರೀತಿಯ ಚುನಾವಣೆ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಭಾರತದ ಚುನಾವಣೆಯ ವಿವಿಧ ಹಂತಗಳ ಪರಿಚಯವಾಗುವುದಲ್ಲದೆ ಉತ್ತಮ ನಾಯಕರುಗಳನ್ನು ಆಯ್ಕೆ ಮಾಡಿಕೊಳ್ಳುವ ವಿಧಾನವನ್ನು ತಿಳಿದುಕೊಳ್ಳಲು ಸಹಕಾರಿಯಾಗುತ್ತದೆ ಎಂದರು. ಈ ಸಂದರ್ಭ ಸಹ ಶಿಕ್ಷಕರಾದ ಎಸ್.ಎಸ್.ರಂಜಿನಿ, ರೇಖಾ, ಶೋಭ, ಗುಲಾಬಿ, ಸಿಬ್ಬಂದಿ ದಿನೇಶ್ ಇದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
