ಸೋಮವಾರಪೇಟೆ; ಶ್ರೀಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಗೋಣಿಮರೂರು ಗ್ರಾಮದಲ್ಲಿ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮಕ್ಕೆ
admincoorgdaily

ಸೋಮವಾರಪೇಟೆ: ತಾಲೂಕಿನ ಗೋಣಿಮರೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಿ.ಸಿ. ಟ್ರಸ್ಟ್ ವತಿಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮವನ್ನು ಈಚೆಗೆ ಹಮ್ಮಿಕೊಳ್ಳಲಾಯಿತು.
ತಾಲೂಕು ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ ಹಾಗೂ ಗ್ರಾಮದ ಗಣ್ಯರಾದ ನಿವೃತ್ತ ಸೈನಿಕ ಧರ್ಮಪ್ಪ, ನಿವೃತ್ತ ಶಿಕ್ಷಕ ನಂಜಪ್ಪ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೋಹನ್, ಕೆರೆ ಸಮಿತಿ ಅಧ್ಯಕ್ಷೆ ಪ್ರೇಮಾ ಹಾಗೂ ರೇವಣ್ಣ ಅವರು ಗಿಡ ನಾಟಿ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ತಾಲೂಕು ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ ಮಾತನಾಡಿ, ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಹಲವು ಜನಪರ ಹಾಗೂ ಪರಿಸರಪರ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಇಂತಹ ಕಾರ್ಯಕ್ರಮಗಳನ್ನು ಮುಂದುವರಿಸಿಕೊಂಡು ಹೋಗುವುದರ ಜೊತೆಗೆ ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು. ನಿವೃತ್ತ ಶಿಕ್ಷಕ ನಂಜಪ್ಪ ಅವರು ಮಾತನಾಡಿ, ಪರಿಸರ ಸಂರಕ್ಷಣೆಯ ಮಹತ್ವ ಹಾಗೂ ಗ್ರಾಮಸ್ಥರ ಸಹಭಾಗಿತ್ವದ ಅಗತ್ಯವನ್ನು ತಿಳಿಸಿದರು.
ಕೆರೆ ಅಂಗಳದಲ್ಲಿ ವಿವಿಧ ಗಿಡಗಳನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ಕೃಷಿ ಮೇಲ್ವಿಚಾರಕ ಸ್ವಾಮಿ, ವಲಯ ಮೇಲ್ವಿಚಾರಕ ದೇವೇಂದ್ರ ಪ್ರಸಾದ್, ಒಕ್ಕೂಟ ಉಪಾಧ್ಯಕ್ಷ ಮನೋಜ್, ಸೇವಾ ಪ್ರತಿನಿಧಿ ಉಷಾ ಸೇರಿದಂತೆ ಗ್ರಾಮಸ್ಥರು ಇದ್ದರು.