ಶಾಸಕ ಡಾ.ಮಂತರ್ ಅಧ್ಯಕ್ಷತೆಯಲ್ಲಿ ಸೋಮವಾರಪೇಟೆ ತಾಲ್ಲೂಕು ಬಗರ್ ಹುಕುಂ ಸಾಗುವಳಿ ಸಮಿತಿ ಸಭೆ

ಸೋಮವಾರಪೇಟೆ:ತಾಲ್ಲೂಕು ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಸಭೆ ಶಾಸಕರಾದ ಶ್ರೀ ಡಾ.ಮಂತರ್ ಗೌಡ ಅಧ್ಯಕ್ಷತೆಯಲ್ಲಿ ಸೋಮವಾರಪೇಟೆ ತಾಲ್ಲೂಕು ಕಛೇರಿಯಲ್ಲಿ ಜರುಗಿತು.ಸರ್ಕಾರದ ನಿಯಮ ಅನುಸಾರವಾಗಿ 50, 53, 57 ಅರ್ಜಿಗಳನ್ನು ಸಕ್ರಮಗೊಳಿಸಲಾಗುತ್ತಿದೆ. ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಮುಂದಿನ ದಿನಗಳಲ್ಲಿ ಅಕ್ರಮ ಸಕ್ರಮದ ಅರ್ಜಿಗಳನ್ನು ಪರಿಶೀಲಿಸಿ ಸಮಿತಿಯಲ್ಲಿ ಮಾಡಲಾಗುತ್ತದೆ, ಅರ್ಜಿ ಗಳನ್ನು ಸರಕಾರದ ನಿಯಮಾನುಸಾರ ವಿಲೇವಾರಿ ಮಾಡಲು ತೀರ್ಮಾನ ಕೈಗೊಳ್ಳಲಾಯಿತು. ಈ ಸಭೆಯಲ್ಲಿ ಸಮಿತಿ ಸದಸ್ಯರುಗಳಾದ ಬಿ ಬಿ ಸತೀಶ್, ಚಂದ್ರಿಕಾ ಕುಮಾರ್, ಜೆ ಎಲ್ ಜನಾರ್ದನ್, ತಹಶೀಲ್ದಾರ್ ಕೃಷ್ಣಮೂರ್ತಿ ಅವರು ಉಪಸ್ಥಿತರಿದ್ದರು.