ಸೋಮವಾರಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ:ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡದ ಅಧಿಕಾರಿಗಳ ವಿರುದ್ಧ ಅಸಮಾಧಾನ

ಸೋಮವಾರಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ:ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡದ ಅಧಿಕಾರಿಗಳ ವಿರುದ್ಧ ಅಸಮಾಧಾನ

ಸೋಮವಾರಪೇಟೆ:ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ವಿರುದ್ಧ ಅಸಮಾಧಾನ ಹೊರ ಹಾಕಿರುವ ಘಟನೆ ಸೋಮವಾರಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಭೆಯಲ್ಲಿ ನಡೆದಿದೆ. ಅಂಗನವಾಡಿ ಕೇಂದ್ರಗಳಿಗೆ ಭೇಟಿನೀಡದ ಹಾಗೂ,ಪರಿಶೀಲನೆ ನಡೆಸದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಸಭೆಗಳಲ್ಲಿ ಸುಳ್ಳುಮಾಹಿತಿ ನೀಡುತ್ತಿರುವುದಾಗಿ ಅಧ್ಯಕ್ಷ ಕಾಂತರಾಜು ಗಂಭೀರ ಆರೋಪ ಮಾಡಿದ್ದಾರೆ. ಅಂಗನವಾಡಿಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ,ಆಹಾರ ಪೋಲಾಗುತ್ತಿದೆ ಎಂದು ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಪರಮೇಶ ಕುಮಾರ್ ಸಭೆಯಲ್ಲಿ ‌ಮಾಹಿತಿ ನೀಡಿದರು. ಗಂಭೀರ ಚಿಕಿತ್ಸೆಗಾಗಿ ಅರ್ಹರಿಗೆ ಬಿಪಿಎಲ್ ಕಾರ್ಡ್ ವಿತರಣೆಯನ್ನು ಸೋಮವಾರಪೇಟೆ ತಾಲೂಕು ಗ್ಯಾರೆಂಟಿ ಅನುಷ್ಠಾನ ಸಭೆಯಲ್ಲಿ ಮಾಡಲಾಯಿತು. ಸೋಮಾವರಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಂತರಾಜು ಅಧ್ಯಕ್ಷತೆಯಲ್ಲಿನಡೆದ ಸಭೆಯಲ್ಲಿ ಗಂಭೀರ ಚಿಕಿತ್ಸೆಗೆ ಅರ್ಹರು ಬಿಪಿಎಲ್ ಕಾರ್ಡ್ ಪಡೆಯುವ ಬಗ್ಗೆ ಆಹಾರ ಇಲಾಖೆ ಅಧಿಕಾರಿಗಳಿಂದ ನೀಡಿದರು‌