ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಅಮೃತ್ ಯೋಜನೆ ಅವ್ಯವಸ್ಥೆ: ನೀರು ಸರಬರಾಜು ಇಲಾಖೆ ಇಂಜಿನಿಯರ್ ಅವರನ್ನು ತರಾಟೆಗೆ ತೆಗೆದುಕೊಂಡ ಸದಸ್ಯರು

ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಅಮೃತ್ ಯೋಜನೆ ಅವ್ಯವಸ್ಥೆ: ನೀರು ಸರಬರಾಜು ಇಲಾಖೆ ಇಂಜಿನಿಯರ್ ಅವರನ್ನು ತರಾಟೆಗೆ ತೆಗೆದುಕೊಂಡ ಸದಸ್ಯರು

ಸೋಮವಾರಪೇಟೆ:ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಅಮೃತ್ ಯೋಜನೆ ಅವ್ಯವಸ್ಥೆಯಿಂದ ಕೂಡಿದ್ದು, ಪಟ್ಟಣದೆಲ್ಲೆಡೆ ರಸ್ತೆ ಹಾಳುಗೆಡವಿದ್ದು, ನೀರು ಸರಬರಾಜು ಇಲಾಖೆ ಇಂಜಿನಿಯರ್ ಅವರನ್ನು ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.ಯೋಜನೆ ಸ್ಥಗಿತಗೊಳಿಸಿ ಜಿಲ್ಲಾಧಿಕಾರಿಗೆ ದೂರು ನೀಡಿ ಎಂದು ಪಕ್ಷಾತೀತವಾಗಿ ಎಲ್ಲಾ ಸದಸ್ಯರ ಆಗ್ರಹಿಸಿದ್ದಾರೆ.ಸಮರ್ಪಕ ಕೆಲಸವಾಗಿದೆ ಇಲ್ಲಿ ನಿಮ್ಮ ಅವಶ್ಯತೆಯಿಲ್ಲ ನೀವು ಹೋಗಿ ಎಂದು ಸದಸ್ಯರೊಬ್ಬರು ಸಭೆಯಲ್ಲಿ ತರಾಟೆ ತೆಗೆದುಕೊಂಡಿದ್ದಾರೆ.