ಸೋಮವಾರಪೇಟೆ: ಹೋಂಸ್ಟೇಯಲ್ಲಿ ಗ್ಯಾಸ್ ಸೋರಿಕೆಯಾಗಿ ಪ್ರವಾಸಕ್ಕೆ ಬಂದಿದ್ದ ಯುವತಿ ಸಾವು

ಸೋಮವಾರಪೇಟೆ: ಹೋಂಸ್ಟೇಯಲ್ಲಿ ಗ್ಯಾಸ್ ಸೋರಿಕೆಯಾಗಿ ಪ್ರವಾಸಕ್ಕೆ ಬಂದಿದ್ದ ಯುವತಿ ಸಾವು

ಮಡಿಕೇರಿ; ಸೋಮವಾರಪೇಟೆಯ ಹೋಂಸ್ಟೇ ಒಂದರಲ್ಲಿ ಇಂದು ಭಾನುವಾರ ಬೆಳಿಗ್ಗೆ ಸಂಭವಿಸಿದ ಗ್ಯಾಸ್ ಸೋರಿಕೆಯಿಂದ ಮೈಸೂರಿನ ಯುವತಿಯೊಬ್ಬರು ಮೃತಪಟ್ಟಿದ್ದಾರೆ.ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆಯ ನಿವಾಸಿ ಜಗನ್ನಾಥ್ ಹಾಗೂ ರೇಣುಕಾ ದಂಪತಿಯ ಪುತ್ರಿ ವಿನೂತ(27) ಮೃತ ದುರ್ದೈವಿ.

ಕೊಡಗಿಗೆ ಪ್ರವಾಸ ಬಂದಿದ್ದ ಈಕೆ ಸೋಮವಾರಪೇಟೆಯ ಚೌಡ್ಲು ಗ್ರಾಮದ ಹೋಂಸ್ಟೆ ಅಲ್ಲಿ ತಂಗಿದ್ದಳು. ಇಂದು ಬೆಳಿಗ್ಗೆ ಸ್ನಾನ ಮಾಡಲು ಬಾತ್ ರೂಮಿಗೆ ತೆರಳಿದ್ದ ಸಂದರ್ಭದಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾಳೆ. ಬಾತ್ ರೂಮಿನಲ್ಲಿ ಕಿಟಕಿ ಇರಲಿಲ್ಲವೆಂದು ಹೇಳಲಾಗಿದೆ. ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.