ಸೋಮವಾರಪೇಟೆ: ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಶಾಸಕ ಡಾ.ಮಂತರ್ ಗೌಡ

ಸೋಮವಾರಪೇಟೆ: ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಶಾಸಕ ಡಾ.ಮಂತರ್ ಗೌಡ

ಸೋಮವಾರಪೇಟೆ:ರೈತರನ್ನು, ಹಿರಿಯ ನಾಗರಿಕರು, ಮಹಿಳೆಯರನ್ನು ಕಾಯಿಸಿದರೆ, ಅದರ ದುಷ್ಪರಿಣಾಮವನ್ನು ಸಿಬ್ಬಂದಿಗಳು ಎದುರಿಸಬೇಕಾಗುತ್ತದೆ ಎಂದು ಶಾಸಕ ಡಾ.ಮಂತರ್‌ಗೌಡ ಎಚ್ಚರಿಸಿದರು.

ಸೋಮವಾರ ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಶಾಸಕರು ರೈತರ ಸಮಸ್ಯೆ ಆಲಿಸಿದರು. ಬೆಳಿಗ್ಗೆ 10ಗಂಟೆಯಿಂದ ನೆಮ್ಮದಿ ಕೇಂದ್ರದಲ್ಲಿ ಕುಳಿತಿದ್ದೇವೆ ಇನ್ನು ಕೆಲಸವಾಗಿಲ್ಲ ಎಂದು ಮಹಿಳೆಯರು ದೂರಿದರು. ತಾಲ್ಲೂಕು ಕಚೇರಿಗೆ ಬರುವ ಸಾರ್ವಜನಿಕರಿಗೆ ನಿಗದಿತ ಸಮಯದಲ್ಲಿ ಕೆಲಸ ಮಾಡಿ ಕೊಡಬೇಕು ಎಂದು ಸೂಚಿಸಿದರು. ಗ್ಯಾರಂಟಿ ಸಮಿತಿ ತಾಲ್ಲೂಕು ಅಧ್ಯಕ್ಷ ಕಾಂತರಾಜು, ಅಕ್ರಮ-ಸಕ್ರಮ ಸಮಿತಿ ಸದಸ್ಯರಾದ ಬಿ.ಬಿ.ಸತೀಶ್, ಜೆ.ಎಲ್.ನಾಗರಾಜ್, ಡಿಸಿಸಿ ಉಪಾಧ್ಯಕ್ಷ ಕೆ.ಎಂ.ಲೋಕೇಶ್ ಇದ್ದರು.