ಅಡುಗೆ ಮಾಡಿಲ್ಲವೆಂದು ತಾಯಿಯನ್ನೇ ಹ*ತ್ಯೆಗೈದ ಮಗ‌

ಅಡುಗೆ ಮಾಡಿಲ್ಲವೆಂದು ತಾಯಿಯನ್ನೇ ಹ*ತ್ಯೆಗೈದ ಮಗ‌
Photo credit:VB(ಕೊಲೆ ಆರೋಪಿ‌‌ ಮಗ)

ಹಾಸನ: ಜಿಲ್ಲೆಯ ಆಲೂರು ತಾಲ್ಲೂಕಿನ ಕದಾಳುಚನ್ನಾಪುರ ಗ್ರಾಮದಲ್ಲಿ ತಾಯಿ–ಮಗನ ಜಗಳ ತಾಯಿ ಕೊಲೆಯಲ್ಲಿ ಅಂತ್ಯ ಕಂಡಿದೆ. ಕುಡಿದು ಮನೆಗೆ ಬಂದಿದ್ದ ಸಂತೋಷ (19) ಅಡುಗೆ ಮಾಡಿಲ್ಲವೆಂದು ತಾಯಿ ಪ್ರೇಮ (45) ಅವರೊಂದಿಗೆ ಜಗಳಕ್ಕೆ ಇಳಿದಿದ್ದ. ಮಾತಿಗೆ ಮಾತು ಬೆಳೆದು ಕೋಪಗೊಂಡ ಸಂತೋಷ ದೊಣ್ಣೆಯಿಂದ ತಲೆಗೆ ಬಲವಾಗಿ ಹೊಡೆದ ಪರಿಣಾಮ ತಾಯಿ ಗಂಭೀರವಾಗಿ ಗಾಯಗೊಂಡರು.

 ಕುಟುಂಬಸ್ಥರು ಅವರನ್ನು ತಕ್ಷಣ ಹಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆಗೆ ಸ್ಪಂದಿಸದೆ ಇಂದು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆ ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.