ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸೂರ್ಲಬ್ಬಿ ಬೂತ್ ಕಾಂಗ್ರೆಸ್ ಸಭೆ

Mar 29, 2026 - 18:26
 0  358
ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ  ಸೂರ್ಲಬ್ಬಿ ಬೂತ್ ಕಾಂಗ್ರೆಸ್ ಸಭೆ

ಸೋಮವಾರಪೇಟೆ;ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಸೂರ್ಲಬ್ಬಿ ಬೂತ್ ಕಾಂಗ್ರೆಸ್ ಸಭೆ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಬಿ ಬಿ ಸತೀಶ್ ರವರ ನೇತೃತ್ವದಲ್ಲಿ ನಡೆಯಿತು. ಬೂತ್ ಕಾಂಗ್ರೆಸ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಿ ಬಿ ಸತೀಶ್ ರವರು ಕರ್ನಾಟಕ ರಾಜ್ಯ ಸರ್ಕಾರದ ಅಭಿವೃದ್ಧಿ ಯೋಜನೆಗಳು ಹಾಗೂ ಗ್ಯಾರಂಟಿ ಯೋಜನೆಗಳು ಬಡವರಿಗೆ ಅನುಕೂಲಕರವಾಗಿದೆ.

 ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕ್ಷೇತ್ರದ ಜನಪ್ರಿಯ ಶಾಸಕರಾದ ಮಾನ್ಯ ಶ್ರೀ ಡಾ.ಮಂತರ್ ಗೌಡ ರವರ ನೇತೃತ್ವದಲ್ಲಿ ಹಿಂದೆಂದೂ ಕಾಣದ ರೀತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಶಾಸಕರಾದ ಶ್ರೀ ಡಾ.ಮಂತರ್ ಗೌಡ ರವರು ಕ್ಷೇತ್ರದ ಜನತೆಯ ಸಮಸ್ಯೆಗಳ ಪರವಾಗಿ ರಾಜ್ಯ ಮಟ್ಟದಲ್ಲಿ ಧ್ವನಿ ಎತ್ತಿದ್ದಾರೆ. ವಿಧಾನ ಸಭಾ ಅಧಿವೇಶನದಲ್ಲಿ 94ಸಿ ಮತ್ತು 94 ಸಿಸಿ ಅರ್ಜಿ ಸ್ವೀಕಾರಕ್ಕೆ ಸಮಗ್ರವಾದ ವಾದ ಮಂಡಿಸಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಸರಕಾರದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

 ಶಾಸಕರ ಅಭಿವೃದ್ಧಿ ಚಿಂತನೆಗಳೊಂದಿಗೆ ನಾವೆಲ್ಲರೂ ಕೈಜೋಡಿಸಿ, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರಮಿಸಬೇಕೆಂದು ಕರೆ ನೀಡಿದರು. ಈ ಸಭೆಯಲ್ಲಿ ಗರ್ವಾಲೆ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಓಂಕಾರಪ್ಪ, ಕಾಂಗ್ರೆಸ್ ಪ್ರಮುಖರಾದ ನಟೇಶ್, ಸೀತಮ್ಮ, ಗಣೇಶ್, ನಾಣಿಯಪ್ಪ, ರಫೀಕ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0