SKSSF GCC Kodagu ವತಿಯಿಂದ ಅನಿವಾಸಿ ಕನ್ನಡಿಗರಿಗೆ SIR ಕುರಿತು ವಿಶೇಷ ಮಾಹಿತಿ ಕಾರ್ಯಾಗಾರ
ದುಬೈ, ಜು. 5: ಕರ್ನಾಟಕದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕುರಿತು ಅನಿವಾಸಿ ಕನ್ನಡಿಗರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ SKSSF GCC Kodagu ವತಿಯಿಂದ ಗೂಗಲ್ ಮೀಟ್ ಮೂಲಕ ವಿಶೇಷ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.
"SIR : ಇದು ಮತದಾರರ ಪಟ್ಟಿ ಪರಿಷ್ಕರಣೆಯಲ್ಲ, ಮತಾಧಿಕಾರ ಹರಣ" ಎಂಬ ವಿಷಯದಡಿ ನಡೆದ ಕಾರ್ಯಕ್ರಮದಲ್ಲಿ ಜಾಗೃತ ಕರ್ನಾಟಕದ ಆದಂ ಖಾನ್ ಮುಖ್ಯ ಭಾಷಣ ಮಾಡಿ, SIR ಪ್ರಕ್ರಿಯೆ, ಮತದಾರರ ಹಕ್ಕುಗಳು, ಅಗತ್ಯ ದಾಖಲೆಗಳು ಹಾಗೂ ಸಾರ್ವಜನಿಕರು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
ಡಾ. ವಾಸು ಹೆಚ್. ವಿ. ಅವರು ಪ್ರಾಸ್ತಾವಿಕ ನುಡಿ ನೀಡಿ ಕಾರ್ಯಕ್ರಮದ ಉದ್ದೇಶ ಹಾಗೂ ಮಹತ್ವವನ್ನು ವಿವರಿಸಿದರು. ಬಳಿಕ ನಡೆದ ಪ್ರಶ್ನೋತ್ತರ ಕಾರ್ಯಕ್ರಮವನ್ನು ಪೃಥ್ವಿರಾಜ್ ಬಿ. ಎಲ್. ಅವರು ನಡೆಸಿಕೊಟ್ಟು, ಭಾಗವಹಿಸಿದವರ ವಿವಿಧ ಪ್ರಶ್ನೆಗಳಿಗೆ ಸ್ಪಷ್ಟನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು SKSSF GCC Kodagu chairma ಹುಸೈನ್ faize bajegundi ವಹಿಸಿದ್ದರು. ಅನಿವಾಸಿ ಕನ್ನಡಿಗರ ಮತದಾನದ ಹಕ್ಕಿನ ಬಗ್ಗೆ ಜಾಗೃತಿ ಮೂಡಿಸಲು ಇಂತಹ ಕಾರ್ಯಕ್ರಮಗಳು ಅತ್ಯಂತ ಅಗತ್ಯ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ SKSSF ಕೊಡಗು ಜಿಲ್ಲಾ ನಾಯಕ ತಮ್ಲೀಕ್ ದಾರಿಮಿ ಹಾಗೂ ಮಾಜಿ SKSSF GCC chairman ಝೈನುದ್ದೀನ್ ಮುಸ್ಲಿಯಾರ್ ಚೊಕ್ಕಂಡಳ್ಳಿ ಭಾಗವಹಿಸಿ ಶುಭ ಹಾರೈಸಿದರು. UAE, ಸೌದಿ ಅರೇಬಿಯಾ ಹಾಗೂ ಇತರ GCC ರಾಷ್ಟ್ರಗಳಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾರ್ಯಕ್ರಮದ ವಿಷಯವಸ್ತು ಅತ್ಯಂತ ಉಪಯುಕ್ತವಾಗಿದ್ದು, ಮತದಾನದ ಹಕ್ಕು ಹಾಗೂ SIR ಪ್ರಕ್ರಿಯೆಯ ಬಗ್ಗೆ ಸ್ಪಷ್ಟ ಅರಿವು ಮೂಡಿಸಿದೆ ಎಂದು ಭಾಗವಹಿಸಿದವರು ಅಭಿಪ್ರಾಯಪಟ್ಟರು. ಕೊನೆಯಲ್ಲಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ ಅತಿಥಿಗಳು, ಭಾಗವಹಿಸಿದ ಅನಿವಾಸಿ ಕನ್ನಡಿಗರು ಹಾಗೂ ಸಹಕರಿಸಿದ ಎಲ್ಲರಿಗೂ SKSSF GCC Kodagu ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0

