ಜೂ.22 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಮಳೆಗಾಗಿ ವಿಶೇಷ ಪೂಜೆ
admincoorgdaily

ಮಡಿಕೇರಿ ಜೂ.20:-ಕೊಡಗು ಜಿಲ್ಲೆಯಲ್ಲಿ 2026ನೇ ಸಾಲಿನ ಮುಂಗಾರು ಮಳೆ ನಿಗದಿತ ಅವಧಿಯಲ್ಲಿ ಬಾರದೆ ಇರುವುದರಿಂದ ಹಾಗೂ ವಾಡಿಕೆಗಿಂತ ಮಳೆ ಕಡಿಮೆ ಆಗಿರುವುದರಿಂದ ಕೃಷಿ ಚಟುವಟಿಕೆಗಳಿಗೂ ಹಾಗೂ ಕುಡಿಯುವ ನೀರಿಗೆ ತೊಂದರೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಸಕಾಲದಲ್ಲಿ ಮಳೆ ಉಂಟಾಗಿ ನಾಡಿಗೆ ಸುಭೀಕ್ಷೆ ಉಂಟು ಮಾಡಲಿ ಎಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಜೂನ್, 22 ರಂದು ಬೆಳಗ್ಗೆ 11 ಗಂಟೆಗೆ ಮಳೆಗಾಗಿ ವಿಶೇಷ ಪೂಜೆಯನ್ನು ದೇವಾಲಯದ ವ್ಯವಸ್ಥಾಪನ ಸಮಿತಿ ವತಿಯಿಂದ ಏರ್ಪಡಿಸಲಾಗಿದೆ. ಭಕ್ತಾದಿಗಳು ಮಳೆಗಾಗಿ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಶ್ರೀ ಓಂಕಾರೇಶ್ವರ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ದೇವರಾಜು ಅವರು ಕೋರಿದ್ದಾರೆ.