ಕ್ರೀಡೆಗಳು ಗ್ರಾಮೀಣ ಸೊಬಗನ್ನು ಎತ್ತಿ ಹಿಡಿಯುವುದರೊಂದಿಗೆ ಜನರಲ್ಲಿ ಒಗ್ಗಟ್ಟು ಮೂಡಿಸುತ್ತದೆ.ಶಾಸಕ ಎ‌ಎಸ್ ಪೊನ್ನಣ್ಣ ಅಭಿಪ್ರಾಯ

ಕ್ರೀಡೆಗಳು ಗ್ರಾಮೀಣ ಸೊಬಗನ್ನು ಎತ್ತಿ ಹಿಡಿಯುವುದರೊಂದಿಗೆ ಜನರಲ್ಲಿ ಒಗ್ಗಟ್ಟು ಮೂಡಿಸುತ್ತದೆ.ಶಾಸಕ ಎ‌ಎಸ್ ಪೊನ್ನಣ್ಣ ಅಭಿಪ್ರಾಯ

ನಾಪೋಕ್ಲು: ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕಿನ ನಾಪೋಕ್ಲು ಹಳೆ ತಾಲೂಕಿನ, ಜಿಎಂಪಿ ಶಾಲಾ ಮೈದಾನದಲ್ಲಿ, ಹಿಂದೂ ಮಲಯಾಳಿ ಸಂಘದ ವತಿಯಿಂದ ಆಯೋಜಿಸಿದ ಜಿಲ್ಲಾಮಟ್ಟದ ಪುರುಷರು ಹಾಗೂ ಮಹಿಳೆಯರ ಹಗ್ಗ ಜಗ್ಗಾಟ ಕ್ರೀಡಾಕೂಟದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಸ್ಥಳೀಯ ಗ್ರಾಮೀಣ ನಿವಾಸಿಗಳು, ಶತಮಾನಗಳಿಂದ ಹಗ್ಗ ಜಗ್ಗಾಟ ದಂತಹ ಹಲವು ಕ್ರೀಡೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಬಂದಿದ್ದಾರೆ. ಇಂತಹ ಕ್ರೀಡೆಗಳು ಗ್ರಾಮೀಣ ಸೊಬಗನ್ನು ಎತ್ತಿ ಹಿಡಿಯುವುದರೊಂದಿಗೆ ಜನರಲ್ಲಿ ಒಗ್ಗಟ್ಟು ಮೂಡಿಸಿ ಪರಸ್ಪರ ಬೆಳೆಯುವುದಕ್ಕೆ ಸಹಕಾರಿಯಾಗಿದೆ. ಬಹುತೇಕ ಕೃಷಿಕರಾಗಿರುವ ಗ್ರಾಮೀಣ ಜನತೆಗೆ, ಇಂತಹ ಕ್ರೀಡಾಕೂಟಗಳು ಮನರಂಜನೆ ಹಾಗೂ ಮನೋಸ್ಥೈರ್ಯವನ್ನು ಹೆಚ್ಚಿಸಲು ಸಹಕಾರಿಯಾಗಿದೆ ಇಂದು ಬಣ್ಣಿಸಿದರು.

ಹಿಂದೂ ಮಲಯಾಳಿ ಸಂಘವು ಹಾಗೂ ಹಿಂದೂ ಮಲಯಾಳಿ ಸಮುದಾಯದವರು ಕೊಡಗಿನ ಅಭಿವೃದ್ಧಿಗೆ ಹಾಗೂ ಏಳಿಗೆಗೆ ಈ ಹಿಂದಿನಿಂದಲೂ ಅನೇಕ ಕೊಡುಗೆಗಳನ್ನು ನೀಡುತ್ತಾ ಬಂದಿದ್ದಾರೆ. ಹಿಂದೂ ಮಲಯಾಳಿ ಸಮುದಾಯದವರ ಕಾರ್ಯಕ್ಷಮತೆ, ಬದ್ಧತೆ ಎಲ್ಲರಿಗೂ ಮಾದರಿಯಾಗಿದೆ. ಕೊಡಗಿನ ಸರ್ವತೋಮುಖ ಅಭಿವೃದ್ಧಿಯಲ್ಲಿ ಹಿಂದೂ ಮಲಯಾಳಿಗಳ ಕೊಡುಗೆ ಗಣನೀಯವಾದದ್ದು ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ತನಗೆ ದೊರೆತಿದ್ದು ಅತ್ಯಂತ ಸಂತೋಷವನ್ನು ನೀಡಿದ್ದು, ನಾಡಿನ ಹಾಗೂ ಕ್ಷೇತ್ರದ ಹಿಂದೂ ಮಲೆಯಾಳಿಗಳ ಶ್ರೇಯೋಭಿವೃದ್ಧಿಗೆ ತಾನು ಬೇಕಾದ ಎಲ್ಲಾ ಸಹಾಯ ಮಾಡುವುದಾಗಿ ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್, ವಲಯ ಅಧ್ಯಕ್ಷರಾದ ಕುಶಾಲಪ್ಪ, ಪಂಚಾಯಿತಿ ಅಧ್ಯಕ್ಷರಾದ ವನಜಾಕ್ಷಿ, ಸದಸ್ಯರಾದ ಅರುಣ್ ಬೇಬ, ಹೇಮಾವತಿ ಅರುಣ್,ಕಕ್ಕಬೆ ಪಂಚಾಯಿತಿ ಮಾಜಿ ಸದಸ್ಯರಾದ ಕಲಿಯಂಡ ಸಂಪನ್ ಅಯ್ಯಪ್ಪ, ದಲ್ಲಿ, ಹಿಂದೂ ಮಲಯಾಳಿ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಸಮುದಾಯದವರು, ಕ್ರೀಡಾ ಪ್ರೇಮಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.