ಸಮುದಾಯದ ಯುವಕರಿಗೆ ಪ್ರತಿಭೆ ಅನಾವರಣಗೊಳಿಸಲು ಕ್ರೀಡಾಕೂಟ ಸಹಕಾರಿ:ಶಾಸಕ ಎಎಸ್ ಪೊನ್ನಣ್ಣ

Dec 22, 2025 - 10:51
 0  163
ಸಮುದಾಯದ ಯುವಕರಿಗೆ ಪ್ರತಿಭೆ ಅನಾವರಣಗೊಳಿಸಲು ಕ್ರೀಡಾಕೂಟ ಸಹಕಾರಿ:ಶಾಸಕ ಎಎಸ್ ಪೊನ್ನಣ್ಣ
ಶಾಸಕ ಎಎಸ್ ಪೊನ್ನಣ್ಣ ಅವರ ಬ್ಯಾಟಿಂಗ್ ಸ್ಟೈಲ್

ಮಡಿಕೇರಿ: ಮೆನ್ಸ್ ಕಾಂಪೌಂಡ್ ಕ್ರೀಡಾಂಗಣದಲ್ಲಿ ಆಯೋಜಿಸಿದ, ಬಿಲ್ಲವ ಸಮುದಾಯದ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಯಾಗಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.  

ಬಳಿಕ ಮಾತನಾಡಿದ ಶಾಸಕರು, ಕೊಡಗಿನಲ್ಲಿ ಎಲ್ಲಾ ಸಮುದಾಯಗಳು ಕುಟುಂಬಗಳು ಒಗ್ಗಟ್ಟಿನಿಂದ ಇರುವ ಕಾರಣ ಇಂತಹ ಕ್ರೀಡಾಕೂಟಗಳು ಮತ್ತಷ್ಟು ಪ್ರಾಶಸ್ತ್ಯವನ್ನು ಪಡೆಯುತ್ತಿದೆ. ಸಮುದಾಯದ ಯುವ ಪೀಳಿಗೆಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಇಂತಹ ಕ್ರೀಡಾಕೂಟಗಳು ತುಂಬಾ ಸಹಕಾರಿಯಾಗಿದೆ. ಯುವ ಜನತೆಯು ಇಂತಹ ಕ್ರೀಡಾಕೂಟಗಳನ್ನು ಸದುಪಯೋಗಿ ಪಡಿಸಿಕೊಂಡು ತಮ್ಮನ್ನು ತಾವು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ನಿಮ್ಮಗಳ ಭವಿಷ್ಯ ಉಜ್ವಲವಾಗಲಿದೆ ಎಂದು ಶಾಸಕರು ಹೇಳಿದರು.

 ಕ್ರೀಡೆಯನ್ನು ಕ್ರೀಡಾಮನೋಭಾವದಿಂದ ಸ್ವೀಕರಿಸಿ ಎಲ್ಲಾ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಲು ಪ್ರಯತ್ನಿಸಿ , ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನಸ್ಥಿತಿ ಬೆಳೆಸಿಕೊಳ್ಳಿ ಎಂದು ಎಲ್ಲರಿಗೂ ಕಿವಿಮಾತು ಹೇಳಿದರು. 

ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಬಿಲ್ಲವ ಸಮಾಜದ ಅಧ್ಯಕ್ಷರು ಲಿಂಗಪ್ಪ ಪೂಜಾರಿ, ಪಕ್ಷದ ಮುಖಂಡರು ಆಪ್ರು ರವೀಂದ್ರ, ಮೈನಾ ಹಾಗೂ ಕಾರ್ಯಕ್ರಮ ಆಯೋಜಕರು, ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0