ಶ್ರೀಮಂಗಲ ಜೆ ಸಿ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
ಪೊನ್ನಂಪೇಟೆ: ಶ್ರೀಮಂಗಲ ಜೆಸಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳು 2025-2026 ಸಾಲಿನ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಭಾರದ ಗುಂಡು ಎಸೆತದಲ್ಲಿ ಅನನ್ಯ ಎಂ ಪ್ರಥಮ, ಎತ್ತರ ಜಿಗಿತದಲ್ಲಿ ಹರ್ಷಿತ ಕೆ ಎಚ್ ಪ್ರಥಮ, ಹಾಗೂ ಕರಾಟೆಯಲ್ಲಿ ವೈಷ್ಣವ್ ಪಿ ಎಸ್ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಉಪಾಧ್ಯಾಯರು ಆಡಳಿತ ಮಂಡಳಿ ಪೋಷಕರು ಹರ್ಷ ವ್ಯಕ್ತಪಡಿಸಿದ್ದಾರೆ.
