ಕೊಡಗು ಜಿಲ್ಲೆಗೆ ಭೇಟಿ ನೀಡಿದ ರಾಜ್ಯ ಪೊಲೀಸ್ ಇಲಾಖೆಯ ಮಹಾ ನಿರ್ದೇಶಕರ ಮತ್ತು ಪೊಲೀಸ್ ಮಹಾ ನಿರೀಕ್ಷಕರಾದ ಡಾ. ಎಂ.ಎ.ಸಲೀಂ
admincoorgdaily

ಮಡಿಕೇರಿ;ರಾಜ್ಯದ ಪೊಲೀಸ್ ಇಲಾಖೆಯ ಮಹಾ ನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರಾದ ಡಾ. ಎಂ.ಎ.ಸಲೀಂ, ಐಪಿಎಸ್‌ರವರು ಜಿಲ್ಲೆಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿದರು.
ಮೊದಲಿಗೆ ಕುಶಾಲನಗರ ಪಟ್ಟಣ ಠಾಣೆಗೆ ಭೇಟಿ ನೀಡಿ ಠಾಣೆಯ ಸಿಬ್ಬಂದಿಗಳೊಂದಿಗೆ ಸಮಾಲೋಚನೆ ನಡೆಸಿದರು. ನಂತರ ಮಡಿಕೇರಿಗೆ ಆಗಮಿಸಿ ಗೌರವ ವಂದನೆ ಸ್ವೀಕರಿಸಿ ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಾನೂನು ಸುವ್ಯವಸ್ಥೆ, ಸಂಚಾರ ವ್ಯವಸ್ಥೆ, ಅಪರಾಧ ಪತ್ತೆ ಮುಂತಾದ ವಿಷಯಗಳ ಬಗ್ಗೆ ಚರ್ಚಿಸಿ ಸೂಕ್ತ ನಿರ್ದೇಶನಗಳನ್ನು ನೀಡಿದರು.
ನಂತರ ಮೈತ್ರಿ ಭವನದ ಬಳಿ ಪೊಲೀಸ್ ವಸತಿ ಸಮುಚ್ಚಯಕ್ಕೆ ತೆರಳಿ ಸಿಬ್ಬಂದಿ ಕುಟುಂಬದವರನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಎಸ್.ಪಿ ಬಿಂದುಮಣಿ ಅವರು ಇದ್ದರು.