ಮಾ.6ರಂದು ರಾಜ್ಯ ಬಜೆಟ್

Feb 12, 2026 - 23:23
 0  214
ಮಾ.6ರಂದು ರಾಜ್ಯ ಬಜೆಟ್

ಬೆಂಗಳೂರು, ಫೆ12: ರಾಜ್ಯ ಕಾಂಗ್ರೆಸ್ ಅಂಗಳದಲ್ಲಿ ಕುರ್ಚಿ ಕಾಳಗ ಮಧ್ಯೆ ಇದೀಗ 2026-27ನೇ ಆರ್ಥಿಕ ವರ್ಷದ ಕರ್ನಾಟಕ ರಾಜ್ಯ ಬಜೆಟ್‌ (Karnataka Budget) ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದೆ.

 ಮಾ.6ರಿಂದ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಮಾ.6ರಂದು ಸಿಎಂ‌ ಸಿದ್ದರಾಮಯ್ಯ (Siddaramaiah) ಬಜೆಟ್ ಮಂಡಿಸಲಿದ್ದಾರೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

 ಮಾ.6ರಿಂದ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಅಧಿವೇಶನದ ಮೊದಲ ದಿನವಾದ ಮಾರ್ಚ್ 6ರಂದು ಸಿಎಂ ಹಾಗೂ ರಾಜ್ಯದ ಹಣಕಾಸು ಸಚಿವ ಸಿದ್ದರಾಮಯ್ಯ ಅವರು ತಮ್ಮ 17ನೇ ಬಜೆಟ್ ಅನ್ನು ಮಂಡಿಸಲಿದ್ದಾರೆ. ಆ ಮೂಲಕ ಅವರು ಹೆಚ್ಚು ಬಾರಿ ಬಜೆಟ್ ಮಂಡಿಸಿದ ನಾಯಕರ ಸಾಲಿನಲ್ಲಿ ಮತ್ತೊಮ್ಮೆ ಗುರುತಿಸಿಕೊಳ್ಳಲಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0