ರಾಜ್ಯ ಮಟ್ಟದ ಫುಟ್ಬಾಲ್;ಬಾಲಕಿಯರ ವಿಭಾಗದಲ್ಲಿ ಮೈಸೂರು ಹಾಗೂ ಬೆಂಗಳೂರು ಚಾಂಪಿಯನ್

ರಾಜ್ಯ ಮಟ್ಟದ ಫುಟ್ಬಾಲ್;ಬಾಲಕಿಯರ ವಿಭಾಗದಲ್ಲಿ ಮೈಸೂರು ಹಾಗೂ ಬೆಂಗಳೂರು ಚಾಂಪಿಯನ್

ಮಡಿಕೇರಿ: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಉಪನಿರ್ದೇಶಕರ ಕಛೇರಿ,ಶಾಲಾ ಶಿಲಾ ಶಿಕ್ಷಣ ಇಲಾಖೆ ಕೊಡಗು ಜಿಲ್ಲೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ವಿರಾಜಪೇಟೆ ತಾಲ್ಲೂಕು ಹಾಗೂ ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್, ಮಿಲನ್ಸ್ ಫುಟ್ಬಾಲ್ ಕ್ಲಬ್ ಅಮ್ಮತ್ತಿ ಇವರ ಸಹಯೋಗದೊಂದಿಗೆ ಅಮ್ಮತ್ತಿಯ ಪ್ರೌಢಶಾಲಾ ಶಾಲಾ ಮೈದಾನದಲ್ಲಿ ರಾಜ್ಯ ಮಟ್ಟದ 14 ಮತ್ತು 17 ವರ್ಷ ವಯೋಮಾನದ ಬಾಲಕ,ಬಾಲಕಿಯರ ಫುಟ್ಬಾಲ್ ಪಂದ್ಯಾವಳಿಯಲ್ಲಿ ಬಾಲಕಿಯರ 17 ವರ್ಷ ವಯೋಮಾನದ ವಿಭಾಗದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿರುವ ಕೊಡಗು ಬಾಲಕಿಯರ ತಂಡ ಚಾಂಪಿಯನ್ ಪ್ರಶಸ್ತಿ ಅಲಂಕರಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ.

ನಿರ್ಣಾಯಕ ಲೀಗ್ ಪಂದ್ಯ ಎರಡನೇ ಪಂದ್ಯದಲ್ಲಿ ಮೈಸೂರು ವಿಭಾಗ ಬಾಲಕಿಯರ ತಂಡವು ಭಾನುವಾರದ ಮೊದಲ ಪಂದ್ಯದಲ್ಲಿ ಬೆಂಗಳೂರು ವಿಭಾಗವನ್ನು 1-0 ಗೋಲುಗಳ ಅಂತರದಿಂದ ಸೋಲಿಸಿತು.ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಮೈಸೂರು ವಿಭಾಗ ತಂಡವು 4-0 ಗೋಲುಗಳ ಅಂತರದಿಂದ ಕಲಬುರ್ಗಿ ವಿಭಾಗದ ತಂಡವನ್ನು ಮಣಿಸಿ ಬಾಲಕಿಯರ 17 ವರ್ಷ ವಿಭಾಗದಲ್ಲಿ ಟೇಪಲ್ ಟಾಪರ್ ಆಗಿ ಚಾಂಪಿಯನ್ ಪ್ರಶಸ್ತಿಯನ್ನು ಅಲಂಕರಿಸಿತು. ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಕೊಡಗು ಬಾಲಕಿಯರ ತಂಡದಲ್ಲಿ ಗೋಣಿಕೊಪ್ಪಲಿನ ಲಯನ್ಸ್ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಕ ನಾಗೇಶ್ ಪಿಎ ಮುಖ್ಯ ತರಬೇತುದಾರರಾಗಿ ಕಾರ್ಯನಿರ್ವಹಿಸಿದ್ದರು.

17 ವರ್ಷದ ಬಾಲಕಿಯರ ವಿಭಾಗದಲ್ಲಿ ಕಲಬುರ್ಗಿ ವಿಭಾಗ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನ ಪಡೆಯಿತು. 17 ವರ್ಷ ಬಾಲಕರ ವಿಭಾಗದಲ್ಲಿ ಡಿವೈಇಎಸ್ ತಂಡವು ಮೂರು ಪಂದ್ಯದಲ್ಲಿ ಗೆಲುವು ಸಾಧಿಸಿ 09 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಪ್ರಥಮ ಸ್ಥಾನ ಪಡೆದಿದೆ. ಬೆಳಗಾವಿ ವಿಭಾಗವು 7 ಅಂಗಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದು, ಇಂದು ಬೆಳಗಾವಿ ವಿಭಾಗ ಡಿವೈಇಎಸ್ ತಂಡಗಳ ನಡುವೆ ಪಂದ್ಯ ನಡೆಯಲಿದ್ದು,ಗೆಲುವು ಪಡೆಯುವ ತಂಡ ಚಾಂಪಿಯನ್ ಪ್ರಶಸ್ತಿ ಅಲಂಕರಿಸಲಿದೆ.

14 ವರ್ಷ ವಯೋಮಾನದ ಬಾಲಕರ ವಿಭಾಗದಲ್ಲಿ ಬೆಳಗಾವಿ ವಿಭಾಗವು 2 ಪಂದ್ಯದಲ್ಲಿ ಎರಡು ಗೆಲುವು ಸಾಧಿಸಿ ಪ್ರಥಮ ಸ್ಥಾನದಲ್ಲಿ ಇದೆ. ಡಿವೈಇಎಸ್ ತಂಡವು 3 ಪಂದ್ಯದಲ್ಲಿ ಎರಡು ಗೆಲುವು ಹಾಗೂ ಒಂದು ಪಂದ್ಯದಲ್ಲಿ ಸೋಲು ಕಂಡು ಆರು ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿ ಇದೆ. ಬೆಂಗಳೂರು ವಿಭಾಗವು ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿ,ಒಂದು ಪಂದ್ಯದಲ್ಲಿ ಸೋಲು ಕಂಡು ಮೂರು ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿ ಇದೆ. 14 ವರ್ಷ ವಯೋಮಾನದ ಬಾಲಕರ ವಿಭಾಗದಲ್ಲಿ ಯಾವ ತಂಡ ಚಾಂಪಿಯನ್ ಪ್ರಶಸ್ತಿ ಅಲಂಕರಿಸಲಿದೆ ಎಂಬುದು ಕುತೂಹಲಕಾರವಾಗಿದೆ.

 ಬಾಲಕಿಯರ 14 ವರ್ಷ ವಯೋಮಾನದ ವಿಭಾಗದಲ್ಲಿ ಬೆಂಗಳೂರು ವಿಭಾಗವು 3 ಪಂದ್ಯದಲ್ಲಿ ಎರಡು ಗೆಲುವು ಹಾಗೂ ಒಂದು ಪಂದ್ಯದಲ್ಲಿ ಡ್ರಾ ಪಡೆದು ಏಳು ಅಂಕಗಳೊಂದಿಗೆ ಟೇಪಲ್ ಟಾಪರ್ ಆಗಿ ಚಾಂಪಿಯನ್ ಪ್ರಶಸ್ತಿ ಅಲಂಕರಿಸಿದೆ. ಬೆಳಗಾವಿ ವಿಭಾಗ ಒಂದು ಪಂದ್ಯದಲ್ಲಿ ಗೆದ್ದು ಎರಡು ಪಂದ್ಯವನ್ನು ಡ್ರಾ ಮಾಡಿಕೊಂಡು ಐದು ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.