ಆಗಸ್ಟ್ 23ರಂದು ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ

ಮಡಿಕೇರಿ:-ಕೊಡಗು ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ಜಿಲ್ಲಾ ಯುವ ಒಕ್ಕೂಟ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಹಾಗೂ ಶ್ರೀ ಕೃಷ್ಣ ಯುವಕ ಸಂಘ, ಅಯ್ಯಂಗೇರಿ ಇವರ ಸಂಯುಕ್ತಾಶ್ರದಲ್ಲಿ ಆಗಸ್ಟ್, 23 ರಂದು ಮಡಿಕೇರಿ ತಾಲ್ಲೂಕು ಭಾಗಮಂಡಲ ಗ್ರಾಮದ ಬಳ್ಳಡ್ಕ ಅಪ್ಪಾಜಿ ಮತ್ತು ಅನು ಅವರ ಗದ್ದೆಯಲ್ಲಿ 2025-26 ನೇ ಸಾಲಿನ ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆಗಳು ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಮಡಿಕೇರಿ ಕೊಡಗು ಜಿಲ್ಲಾ ಯುವ ಒಕ್ಕೂಟ ಅಧ್ಯಕ್ಷರಾದ ಪಿ.ಪಿ ಸುಕುಮಾರ್ 9481213920, ಮಡಿಕೇರಿ ತಾಲ್ಲೂಕು ಯುವ ಒಕ್ಕೂಟ ಅಧ್ಯಕ್ಷ ಬಾಳಾಡಿ ದಿಲೀಪ್ ಕುಮಾರ್ 8618568173, ಮಡಿಕೇರಿ ಆಯ್ಯಂಗೇರಿ, ಕೃಷ್ಣ ಯುವಕ ಸಂಘದ ಅಧ್ಯಕ್ಷರು ಲತೇಶ್ 9483662610, ಮಡಿಕೇರಿ ಕೃಷ್ಣ ಯುವಕ ಸಂಘದ ಗೌರವ ಅಧ್ಯಕ್ಷರು ಜೀವನ್ ಕುಮಾರ್ 9353426073, ಮಡಿಕೇರಿ ಶ್ರೀ ಕೃಷ್ಣ ಯುವಕ ಸಂಘದ ಕಾರ್ಯದರ್ಶಿ, ಅಭಿಷೇಕ್-6361621643, ಮಡಿಕೇರಿ ಶ್ರೀ ಕೃಷ್ಣ ಯುವಕ ಸಂಘದ ಸದಸ್ಯರು ಪ್ರತೀಶ್- 8217801336 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಅವರು ತಿಳಿಸಿದ್ದಾರೆ.