ಮಾದಕ ದ್ರವ್ಯಗಳಿಂದ ದೂರವಿದ್ದು ಶಿಕ್ಷಣಕ್ಕೆ ಆದ್ಯತೆ ನೀಡಿ:ಸಿದ್ದಾಪುರ ಪ್ರೌಢಶಾಲೆಯಲ್ಲಿ ಠಾಣಾಧಿಕಾರಿ ಮಂಜುನಾಥ್ ಜಾಗೃತಿ ಸಂದೇಶ

Aug 6, 2026 - 21:57
 0  1
ಮಾದಕ ದ್ರವ್ಯಗಳಿಂದ ದೂರವಿದ್ದು ಶಿಕ್ಷಣಕ್ಕೆ ಆದ್ಯತೆ ನೀಡಿ:ಸಿದ್ದಾಪುರ ಪ್ರೌಢಶಾಲೆಯಲ್ಲಿ ಠಾಣಾಧಿಕಾರಿ ಮಂಜುನಾಥ್ ಜಾಗೃತಿ ಸಂದೇಶ

ಸಿದ್ದಾಪುರ: ವಿದ್ಯಾರ್ಥಿಗಳು ಮಾದಕ ದ್ರವ್ಯಗಳ ದುಷ್ಪರಿಣಾಮಗಳನ್ನು ಅರಿತು ಅವುಗಳಿಂದ ಸಂಪೂರ್ಣ ದೂರವಿದ್ದು, ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಕರೆ ನೀಡಿದರು.

 ಸಿದ್ದಾಪುರ ಪ್ರೌಢಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾದಕ ದ್ರವ್ಯ ಸೇವನೆಯಿಂದ ಉಂಟಾಗುವ ಆರೋಗ್ಯ, ಸಾಮಾಜಿಕ ಹಾಗೂ ಕಾನೂನು ಸಂಬಂಧಿತ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಯಾವುದೇ ಆಮಿಷಗಳಿಗೆ ಒಳಗಾಗದೆ ಉತ್ತಮ ಶಿಕ್ಷಣ ಪಡೆದು ಸಮಾಜದ ಉತ್ತಮ ಪ್ರಜೆಗಳಾಗುವಂತೆ ಸಲಹೆ ನೀಡಿದರು.

 ಇದೇ ವೇಳೆ ರಸ್ತೆ ಸುರಕ್ಷತಾ ನಿಯಮಗಳ ಪಾಲನೆ, ಸಂಚಾರ ಶಿಸ್ತು ಹಾಗೂ ಅಪಘಾತಗಳನ್ನು ತಡೆಗಟ್ಟಲು ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮಾಹಿತಿ ನೀಡಿದರು. ಸರ್ಕಾರದಿಂದ ವಿದ್ಯಾರ್ಥಿಗಳಿಗೆ ದೊರೆಯುವ ವಿವಿಧ ಶೈಕ್ಷಣಿಕ ಸೌಲಭ್ಯಗಳು ಹಾಗೂ ಶಿಕ್ಷಣದ ಮಹತ್ವವನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಪೋಕ್ಸೋ ಕಾಯ್ದೆಯ ಕುರಿತು ಅರಿವು ಮೂಡಿಸಿ, ಮಕ್ಕಳ ಮೇಲಿನ ದೌರ್ಜನ್ಯ ಅಥವಾ ಕಿರುಕುಳದ ಘಟನೆಗಳು ಕಂಡುಬಂದರೆ ತಕ್ಷಣ ಪೋಷಕರು, ಶಿಕ್ಷಕರು ಅಥವಾ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿ ವಿವಿಧ ವಿಷಯಗಳ ಕುರಿತು ಮಾಹಿತಿ ಪಡೆದುಕೊಂಡರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0