ಬೀದಿ ನಾಯಿಗಳ ದಾಳಿ : ಜಿಂಕೆ ಸಾವು
ಕುಶಾಲನಗರ, ಜು.6 : ಕುಶಾಲನಗರ ಸಮೀಪದ ಗುಡ್ಡೆಹೊಸೂರು ಬಳಿ ಕೆಲ ಬೀದಿ ನಾಯಿಗಳು ಜಿಂಕೆಯೊಂದನ್ನು ಭಕ್ಷಿಸುತ್ತಿರುವುದನ್ನು ಪ್ರತ್ಯಕ್ಷದರ್ಶಿಗಳು ಕಂಡಿದ್ದಾರೆ. ದೊರೆತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಜಿಂಕೆಯ ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಜಿಂಕೆಯು ನಿಸರ್ಗಧಾಮ ಸಮೀಪದ ಅರಣ್ಯ ಪ್ರದೇಶದಿಂದ ಬಂದಿರಬಹುದೆಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
2
Wow
0

