ಸೈನಿಕ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಪದಗ್ರಹಣ
ಕುಶಾಲನಗರ, ಜು 03: ಸೈನಿಕ ಶಾಲೆ ಕೊಡಗಿನಲ್ಲಿ ನೂತನವಾಗಿ ಆಯ್ಕೆಗೊಂಡ ವಿದ್ಯಾರ್ಥಿ ನಾಯಕರ ಪದಗ್ರಹಣ ಸಮಾರಂಭವು ಶಾಲೆಯ ಕುವೆಂಪು ವಿವಿಧೋದ್ದೇಶ ಸಭಾಂಗಣದಲ್ಲಿ ಜರುಗಿತು.
ಕಾರ್ಯಕ್ರಮದಲ್ಲಿ ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ನಾಯಕರು ಅಧಿಕೃತವಾಗಿ ತಮ್ಮ ಜವಾಬ್ದಾರಿಗಳನ್ನು ವಹಿಸಿಕೊಂಡರು. ಕಾರ್ಯಕ್ರಮಕ್ಕೆ ಶಾಲೆಯ ಪ್ರಭಾರ ಪ್ರಾಂಶುಪಾಲರಾದ ವಿಂಗ್ ಕಮಾಂಡರ್ ಮಹಮದ್ ಶಾಜಿಯವರು ಮುಖ್ಯ ಅತಿಥಿಗಳಾಗಿ ಆಗಮಿಸಿ,
ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ನಾಯಕರುಗಳಿಗೆ ಬ್ಯಾಡ್ಜ್‌ಗಳನ್ನು ತೊಡಿಸುವ ಮೂಲಕ ಜವಾಬ್ದಾರಿಗಳನ್ನು ನೀಡಿದರಲ್ಲದೆ , ಎಲ್ಲಾ ನಿಲಯಗಳ ಉಪನಾಯಕರುಗಳಿಗೂ ನಿಲಯಗಳ ಬ್ಯಾಡ್ಜ್‌ಗಳನ್ನು ನೀಡಿ ಗೌರವಿಸಲಾಯಿತು.
ನೂತನವಾಗಿ ಪದಗ್ರಹಣ ಮಾಡಿದ ವಿದ್ಯಾರ್ಥಿ ನಾಯಕರು ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕತೆ, ನಿಷ್ಠೆ ಮತ್ತು ಬದ್ಧತೆಯಿಂದ ನಿರ್ವಹಿಸುವುದಾಗಿ ಜಂಟಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಪ್ರಭಾರೆ ಪ್ರಾಂಶುಪಾಲರಾದ ವಿಂಗ್ ಕಮಾಂಡರ್ ಮೊಹಮ್ಮದ್ ಶಾಜಿ ರವರು, ನೂತನವಾಗಿ ಆಯ್ಕೆಯಾದ ಉಪನಾಯಕರನ್ನು ಅಭಿನಂದಿಸಿದರಲ್ಲದೆ ಶಾಲೆಯ ಮೌಲ್ಯಗಳು ಹಾಗೂ ಧ್ಯೇಯವಾಕ್ಯವನ್ನು ಎತ್ತಿಹಿಡಿಯುವಂತೆ ಕರೆನೀಡಿದರು.
ಸಮಾರಂಭದಲ್ಲಿ ಹಿರಿಯ ಶಿಕ್ಷಕರಾದ ವಿಬಿನ್ ಕುಮಾರ್, ಶಾಲೆಯ ಬೋಧಕ-ಬೋಧಕೇತರ ಸಿಬ್ಬಂದಿ, ಎನ್‌ಸಿಸಿ ಸಿಬ್ಬಂದಿ, ದೈಹಿಕ ಶಿಕ್ಷಕರು ಹಾಗೂ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕೆಡೆಟ್ ಧ್ರುವ ವಿ. ಭಾರದ್ವಾಜ್ ಹಾಗೂ ಕೆಡೆಟ್ ತರುಣ್ ಪ್ರವೀಣ್ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0

