ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆಯಾದ ಆಲೂರು ಸಿದ್ದಾಪುರ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು

ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆಯಾದ ಆಲೂರು ಸಿದ್ದಾಪುರ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು

ಶನಿವಾರಸಂತೆ:ಮಡಿಕೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಆಲೂರು ಸಿದ್ದಾಪುರ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಬಾಲಕರ ತಂಡವು ಪಂದ್ಯಾವಳಿಯಲ್ಲಿ ಭಾಗವಹಿಸಿ ಮಡಿಕೇರಿ ತಾಲೂಕಿನ ವಾಲಿಬಾಲ್ ತಂಡವನ್ನು ಸೋಲಿಸಿದ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಸ್ಥಾನವನ್ನು ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದು ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಮುಂಡಾಜೆಯಲ್ಲಿ ನಡೆಯಲಿರುವ ವಿಭಾಗ ಮಟ್ಟದ ವಾಲಿಬಾಲ್ ಪದ್ಯಾವಳಿಯಲ್ಲಿ ಬಾಲಕರ ತಂಡವು ಕೊಡಗು ಜಿಲ್ಲೆಯಿಂದ ಪ್ರತಿನಿಧಿಸಲಿದ್ದಾರೆ ಎಂದು ಆಲೂರುಸಿದ್ದಾಪುರ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಕ್ರೀಡಾ ತರಬೇತುದಾರ ಹಂಚೇಟ್ಟಿರ ಪಿ.ಕರುಂಬಯ್ಯ ಮತ್ತು ಶಾಲೆಯ ಮುಖ್ಯ ಶಿಕ್ಷಕ ಎಸ್.ಕೆ.ಉದಯ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.