ಸರ್ವದೈವತಾ ಪ್ರೌಢಶಾಲೆಯ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ವಿಭಾಗ ಮತ್ತು ರಾಜ್ಯಮಟ್ಟಕ್ಕೆ ಆಯ್ಕೆ
ಗೋಣಿಕೊಪ್ಪ: ಸಾರ್ವಜನಿಕ ಸಾಕ್ಷರತಾ ಮತ್ತು ಶಿಕ್ಷಣ ಇಲಾಖೆ, ಕೊಡಗು ಜಿಲ್ಲೆ ಇವರ ಆಶ್ರಯದಲ್ಲಿ ನಡೆದ ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ವಿರಾಜಪೇಟೆ ತಾಲೂಕನ್ನು ಪ್ರತಿನಿಧಿಸಿದ್ದ ಸರ್ವದೈವತ ಶಾಲೆಯ ಬಾಲಕ ಬಾಲಕಿಯರ ತಂಡ ಥ್ರೋಬಾಲ್ ನಲ್ಲಿ ಪ್ರಥಮ, ವಾಲಿಬಾಲ್ ನಲ್ಲಿ ಬಾಲಕಿಯರು ಪ್ರಥಮ, ಟೇಬಲ್ ಟೆನಿಸ್ ನಲ್ಲಿ ಬಾಲಕರು ಪ್ರಥಮ ಮತ್ತು ಬಾಲಕಿಯರು ದ್ವಿತೀಯ ಸ್ಥಾನವನ್ನು ಪಡೆದುಕೊಂಡು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಲ್ಲದೆ, ರಾಜ್ಯಮಟ್ಟಕ್ಕೂ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯವಾಗಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ ಬೋಧಕ ವರ್ಗ ಹರ್ಷ ವ್ಯಕ್ತಪಡಿಸಿದೆ. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಕ ಪ್ರಮೋದ್ ಗೌಡ ತರಬೇತಿ ನೀಡಿರುತ್ತಾರೆ.
