ಮಂಗಳೂರು ವಿಭಾಗದ ಅಂಡರ್ 14 ಕ್ರಿಕೆಟ್ ತಂಡಕ್ಕೆ ವಿರಾಜಪೇಟೆ ಪ್ರಗತಿ ಶಾಲೆಯ ವಿದ್ಯಾರ್ಥಿಗಳು ಆಯ್ಕೆ

Jan 1, 2026 - 10:58
 0  339
ಮಂಗಳೂರು ವಿಭಾಗದ ಅಂಡರ್ 14 ಕ್ರಿಕೆಟ್ ತಂಡಕ್ಕೆ ವಿರಾಜಪೇಟೆ ಪ್ರಗತಿ ಶಾಲೆಯ ವಿದ್ಯಾರ್ಥಿಗಳು ಆಯ್ಕೆ
ಆಯ್ಕೆಯಾದ ವಿದ್ಯಾರ್ಥಿಗಳು

ಮಡಿಕೇರಿ:ವಿರಾಜಪೇಟೆಯ ಪ್ರತಿಷ್ಠಿತ ವಿದ್ಯಾಸಂಸ್ಥೆ ಪ್ರಗತಿ ಶಾಲೆಯ ವಿದ್ಯಾರ್ಥಿಗಳಾದ ವೃಥನ್ ಹಾಗೂ ಲೋಹನ್ ಮಂಗಳೂರು ವಿಭಾಗದ ಅಂಡರ್ 14 ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಅಂತರ್ ವಿಭಾಗ ಮಟ್ಟದ ಪಂದ್ಯಾವಳಿಯಲ್ಲಿ ವೃಥನ್ ಹಾಗೂ ಲೋಹನ್ ಮಂಗಳೂರು ವಿಭಾಗವನ್ನು ಪ್ರತಿನಿಧಿಸಲಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಯ ಆಟಗಾರರು ಮಂಗಳೂರು ವಿಭಾಗದಲ್ಲಿ ಸ್ಥಾನ‌ ಪಡೆದಿದ್ದಾರೆ. ವಿದ್ಯಾರ್ಥಿಗಳು ಸಾಧನೆಗೆ ಪ್ರಗತಿ ವಿದ್ಯಾಸಂಸ್ಥೆಯ ಮುಖ್ಯಸ್ಥರಾದ ಮಾದಂಡ ತಿಮ್ಮಯ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 1