ಸುಂದರನಗರ: ಐದು ಲಕ್ಷ ರೂ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ

Jul 3, 2026 - 17:24
 0  455
ಸುಂದರನಗರ: ಐದು ಲಕ್ಷ ರೂ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ

ಕುಶಾಲನಗರ,ಜು೩: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂದರನಗರದಲ್ಲಿ ಶಾಸಕರ ಅನುದಾನದಡಿ ಐದು ಲಕ್ಷ ರೂ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ನಡೆಸಲಾಯಿತು.

ಸುಂದರನಗರದ ಸಮುದಾಯ ಭವನದಿಂದ ಮೀನಾರವರ ಮನೆ ಬಳಿ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗಿದ್ದು, ಕಾಮಗಾರಿಯನ್ನು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕೆ.ಬಿ.ಶಂಶುದ್ಧೀನ್ ಅವರು ವೀಕ್ಷಣೆ ಮಾಡಿದರು.

ನಂತರ ಮಾತನಾಡಿದ ಅವರು, ಸುಂದರನಗರ ವಾರ್ಡ್ ನಲ್ಲಿ ರಸ್ತೆ ಅಭಿವೃದ್ಧಿಗೆ ಐದು ಲಕ್ಷ ರೂ ಅನುದಾನ ನೀಡಿದ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡರವರಿಗೆ ಗ್ರಾಮಸ್ಥರ ಪರವಾಗಿ ಧನ್ಯವಾದಗಳು. ವಾರ್ಡ್ ಅಭಿವೃದ್ಧಿಗೆ ಇನ್ನಷ್ಟು ಅನುದಾನ ನೀಡುವಂತೆ ಮನವಿ ಮಾಡಿದರು. ಈ ಸಂದರ್ಭ ಮಾಜಿ ಸದಸ್ಯರಾದ ಜಯಮ್ಮ, ಗುತ್ತಿಗೆದಾರರಾದ ನವೀನ್, ಗ್ರಾಮಸ್ಥರಾದ ಹರೀಶ್, ಪಳಣಿ, ಮೀನಾ ಹಾಗೂ ಇನ್ನಿತರರು ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 2
Sad Sad 0
Wow Wow 0