ಸುಂಟಿಕೊಪ್ಪ: ಸಂತ ಮೇರಿ ಆಂಗ್ಲ ಮಾದ್ಯಮ ಶಿಕ್ಷಣ ಸಂಸ್ಥೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘ ಉದ್ಘಾಟನೆ
ಸುಂಟಿಕೊಪ್ಪ: ವಿದ್ಯಾರ್ಥಿಗಳ ಭವ್ಯ ಭವಿಷ್ಯ ಮತ್ತು ಬದುಕಿಗೆ ವಿದ್ಯಾಭ್ಯಾಸ ಮೂಲ ಆಧಾರ ಎಂದು ಬೆಟ್ಟಗೇರಿ ಸಮೂಹ ತೋಟಗಳ ಮಾಲೀಕರು, ಉದ್ಯಮಿ ದೊಡ್ಡಮನೆ ವಿಶಾಲ್ ಶಿವಪ್ಪ ಹೇಳಿದರು . ಇಲ್ಲಿನ ಸಂತ ಮೇರಿ ಆಂಗ್ಲ ಮಾದ್ಯಮ ಶಿಕ್ಷಣ ಸಂಸ್ಥೆಯ ವತಿಯಿಂದ ಗುರುವಾರ ನಡೆದ ಶಾಲಾ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾಭ್ಯಾಸವು ಪಠ್ಯವನ್ನು ಮಾತ್ರವಲ್ಲದೆ ಕ್ರೀಡೆಯನ್ನು ಒಳಗೊಂಡಿದೆ. ಸಾಧನೆ ಮತ್ತು ಒಳ್ಳೆಯ ಬದುಕಿಗೆ ನಾವು ಆಯ್ಕೆಮಾಡಿಕೊಂಡ ವಿದ್ಯಾಭ್ಯಾಸ ಅಥವಾ ಕ್ರೀಡಾ ಕ್ಷೇತ್ರದಲ್ಲಿ ಏಕಾಗ್ರತೆ, ಕಠಿಣ ಪರಿಶ್ರಮ ಅಗತ್ಯ. ಯಾವುದೇ ಸಂದರ್ಭದಲ್ಲೂ ಏಕಾಗ್ರತೆ ಮತ್ತು ಕಠಿಣ ಪರಿಶ್ರಮ ವನ್ನು ಭಂಗಗೊಳಿಸುವ ಆಸೆ ಅಮೀಷಗಳಿಗೆ ಬಲಿಯಾಗದಿರಿ ಎಂದರು. ಜೋತೆಗೆ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅಗತ್ಯ.ಬಲಿಷ್ಠ ದೇಹದಲ್ಲಿ ಸುಪುಷ್ಠ ಮನಸ್ಸನ್ನು ಸದಾ ಎಚ್ಚರವಹಿಸಲು ಅವರು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತ ಮೇರಿ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕರಾದ ರೇ.ಪಾ.ವಿಜಯಕುಮಾರ್ ವಹಿಸಿದ್ದರು. ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯನಿ ಸಿಸ್ಟರ್ ಜೋವಿಟಾ ವಾಜ್ ಮತ್ತು ಸಂತ ಮೇರಿ ಶಿಕ್ಷಣ ಸಂಸ್ಥೆಯ ಮುಖ್ಯೋಪಾದ್ಯಾಯರಾದ ಸೆಲ್ವರಾಜ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮೊದಲಿಗೆ ಶಿಕ್ಷಣ ಸಂಸ್ಥೆಗಳ ವತಿಯಿಂದ ಶಿಸ್ತುಬದ್ಧ ಪಥಸಂಚಲನ ಮತ್ತು ಅತಿಥಿಗಳಿಗೆ ಗೌರವ ವಂದನೆಯನ್ನು ವಿದ್ಯಾರ್ಥಿಗಳು ನೀಡಿದರು. ನಂತರ ಚುನಾಯಿತರಾದ ವಿದ್ಯಾರ್ಥಿ ಘಟಕದ ಪದಾಧಿಕಾರಿಗಳನ್ನು ವಾಧ್ಯಗೋಷ್ಠಿಯ ಮೂಲಕ ಕರೆ ತಂದು ಗೌರವ ಸೂಚಿಸಲಾಯಿತು.ಎಲ್ಲ ಘಟಕದ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ ಮನರಂಜನೆ ನೀಡಿತು. ಶಿಕ್ಷಕರಾದ ಬಿಜು, ಹಮೀದ್, ಚಂದ್ರು ಇತರರು ಇದ್ದರು.