ಸುಂಟಿಕೊಪ್ಪ: ಸ್ನಾತಕೋತ್ತರ ಪದವಿಯಲ್ಲಿ ಬಿ.ಪಿ‌ ಕೃತಿಕಾ ಅವರಿಗೆ ಐದು ಚಿನ್ನದ ಪದಕ

ಸುಂಟಿಕೊಪ್ಪ: ಸ್ನಾತಕೋತ್ತರ ಪದವಿಯಲ್ಲಿ ಬಿ.ಪಿ‌ ಕೃತಿಕಾ ಅವರಿಗೆ ಐದು ಚಿನ್ನದ ಪದಕ

ಸುಂಟಿಕೊಪ್ಪ: ಮೈಸೂರು ವಿಶ್ವ ವಿದ್ಯಾನಿಲಯದ 106ನೇ ಘಟಿಕೋತ್ಸವದಲ್ಲಿ ಕೊಡಗಿನ ವಿದ್ಯಾರ್ಥಿನಿ ಬಿ.ಪಿ.ಕೃತಿಕಾ ಸ್ನಾತಕೋತ್ತರ ಪದವಿಯನ್ನು ಮೊದಲ ರ‍್ಯಾಂಕ್ ನೊಂದಿಗೆ ಪಡೆದಿದ್ದು 5 ಚಿನ್ನದ ಪದಕಗಳು ಮತ್ತು 1 ನಗದು ಬಹುಮಾನಕ್ಕೆ ಭಾಜನರಾಗಿದ್ದು ಕೊಡಗಿಗೆ ಕೀರ್ತಿ ತಂದಿದ್ದಾರೆ.

 ಮೂಲತಃ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಹೋಬಳಿಯ ಕೊಡಗರಹಳ್ಳಿ ಗ್ರಾಮ ನಿವಾಸಿ ನಿವೃತ್ತ ಎ.ಎಸ್.ಐ ಪಾರ್ಥ ಮತ್ತು ನಿವೃತ್ತ ಮುಖ್ಯೋಪಾದ್ಯಾಯನಿ ಗೀತಾ ಪಾರ್ಥ ಅವರ ಪುತ್ರಿ ಪ್ರಸ್ತುತ ಪೊನ್ನಂಪೇಟೆ ನಿವಾಸಿ ಲವೀನ್ ಬಿದ್ದಪ್ಪ ಅವರ ಪತ್ನಿಯಾಗಿರುವ ಕೃತಿಕಾ ತಮ್ಮ ಎಂ.ಎಡ್ ಪದವಿಯಲ್ಲಿ ಈ ಸಾಧನೆ ಮಾಡಿದ್ದು ಇತ್ತೀಚೆಗೆ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಂದ ಪ್ರಮಾಣ ಪತ್ರ ಮತ್ತು ಪ್ರಶಸ್ತಿ ಸ್ವೀಕರಿಸಿದರು.