ಸುಂಟಿಕೊಪ್ಪ:ಗಾಳಿ ಮಳೆಗೆ ವಾಸದ ಮನೆಯ ಗೋಡೆ ಕುಸಿತ

Jul 7, 2026 - 09:47
 0  712
ಸುಂಟಿಕೊಪ್ಪ:ಗಾಳಿ ಮಳೆಗೆ ವಾಸದ ಮನೆಯ ಗೋಡೆ ಕುಸಿತ

ಸುಂಟಿಕೊಪ್ಪ: ನಿರಂತರವಾಗಿ ಬೀಸುತ್ತಿರುವ ಗಾಳಿ ಮಳೆಗೆ ವಾಸದ ಮನೆಯ ಗೋಡೆ ಕುಸಿದು ಲಕ್ಷಾಂತರ ರೂ ನಷ್ಟ ಉಂಟಾಗಿರುವ ಘಟನೆ ಜನತಾ ಕಾಲೋನಿಯಲ್ಲಿ ನಡೆದಿದೆ.

 ಪಟ್ಟಣದ ಜನತಾ ಕಾಲೋನಿ ನಿವಾಸಿ ಎಲಿಜಬೆತ್ ಎಂಬುವವರ ಮನೆಯು ಗಾಳಿ ಮಳೆಗೆ ಮೇಲ್ಚಾವಣಿ ಹಾಗೂ ಗೋಡೆ ಕುಸಿತಗೊಂಡಿದ್ದು,ಮನೆಯ ಕೆಲವು ಗೃಹೋಪಯೋಗಿ ವಸ್ತುಗಳು ಹಾನಿಯಾಗಿದೆ.

ಇದರಿಂದ ಮನೆಯು ಭಾಗಶಃ ಹಾನಿಯಾಗಿರುವುದರಿಂದ ಲಕ್ಷಾಂತರ ರೂ ನಷ್ಟ ಉಂಟಾಗಿದೆ. ಘಟನೆಯ ಸಂದರ್ಭ ಮನೆ ಮಂದಿ ಸೇರಿದಂತೆ ಸಣ್ಣ ಮಗುವಿದ್ದು ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಕಂದಾಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿಗಳು ಸ್ಥಳ ಪರಿಶೀಲನೆ ನಡೆಸಿದರು.

What's Your Reaction?

Like Like 1
Dislike Dislike 0
Love Love 1
Funny Funny 0
Angry Angry 1
Sad Sad 0
Wow Wow 0