ಸುಂಟಿಕೊಪ್ಪ: ಕಾಡಾನೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

Aug 12, 2026 - 18:25
 0  321
ಸುಂಟಿಕೊಪ್ಪ:  ಕಾಡಾನೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಸುಂಟಿಕೊಪ್ಪ: ಸಮೀಪದ ಕೊಡಗರಹಳ್ಳಿ ಗ್ರಾಮದಲ್ಲಿ ಅಂದಾಜು 30 ವರ್ಷ ಪ್ರಾಯದ ಹೆಣ್ಣು ಕಾಡಾನೆ ಮೃತಪಟ್ಟಿರುವುದು ಕಂಡುಬಂದಿದೆ. ಕಾನ್ ಬೈಲು ನಿವಾಸಿ ದಾಸಂಡ ಕಿರಣ ಅವರ ತೋಟದಲ್ಲಿ ಇಂದು ಆನೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕಾರಣದ ಬಗ್ಗೆ ಅನುಮಾನವಿರುವ ಹಿನ್ನೆಲೆ ಚೆಸ್ಕಾಂ ಅಧಿಕಾರಿಗಳು ಕೂಡ ಸ್ಥಳಕ್ಕೆ ಆಗಮಿಸಿ ವಿದ್ಯುತ್ ಸಂಪರ್ಕ, ವಿದ್ಯುತ್ ತಂತಿ ತಗುಲಿದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0