ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್
admincoorgdaily

ಮಡಿಕೇರಿ; ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಇಂದು ಕೊಡಗಿಗೆ ಭೇಟಿ ನೀಡಿ, ಮಡಿಕೇರಿ ಸಮೀಪದ ಕರ್ಣಂಗೇರಿಯಲ್ಲಿ ಐಷಾರಾಮಿ ರೆಸಾರ್ಟ್ ವೊಂದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.ಸುಂಟಿಕೊಪ್ಪ ಬೆಟ್ಟಗೇರಿ ಎಸ್ಟೇಟ್ ಮಾಲೀಕ ವಿನೋದ್ ಶಿವಪ್ಪ, ಜಿಲ್ಲಾಡಳಿತದ ಕಾನೂನು ಸಲಹೆಗಾರರಾದ ಎ. ಲೋಕೇಶ್ ಕುಮಾರ್ ಹಾಗೂ ಇನ್ನಿತರ ಪ್ರಮುಖರು ರಜನಿಕಾಂತ್ ಅವರೊಂದಿಗಿದ್ದಾರೆ.