ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಸರಬರಾಜು ಕುಂಠಿತ;ಹೋಟೆಲ್ ಕಾರ್ಮಿಕರು ಬೀದಿಪಾಲು

Mar 26, 2026 - 20:36
 0  259
ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಸರಬರಾಜು ಕುಂಠಿತ;ಹೋಟೆಲ್ ಕಾರ್ಮಿಕರು ಬೀದಿಪಾಲು

ಮಡಿಕೇರಿ: ಮಧ್ಯ ಪ್ರಾಚ್ಯ ಯುದ್ಧದ ಕಾರಣದಿಂದ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರಿನ ಸರಬರಾಜು ಕುಂಠಿತಗೊಂಡಿದ್ದು, ಹೋಟೆಲಿನ ಮಾಲೀಕರು ತಮ್ಮ ಕಾರ್ಯ ಚಟುವಟಿಕೆಯನ್ನು ಸ್ಥಗಿತಗೊಳಿಸುತ್ತಿದ್ದು, ಇದರಿಂದ ಹೋಟೆಲ್ ಗಳಲ್ಲಿ ಕೆಲಸಗಳನ್ನು ನಿರ್ವಹಿಸಿಕೊಂಡು ತಮ್ಮ ಜೀವನ ಸಾಗಿಸುತ್ತಿರುವ ಅಸಂಖ್ಯಾತ ಬಡ ಕಾರ್ಮಿಕರು ಬೀದಿಪಾಲಾಗಿದ್ದಾರೆ.

ಇವರ ಜೀವನ ಉಪಯೋಗಕ್ಕೆ ಸರಕಾರದಿಂದ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಹೋಟೆಲ್ ಗಳಲ್ಲಿ ದುಡಿಯುವ ಬಡ ಕಾರ್ಮಿಕರಿಗೆ ಸರಕಾರದಿಂದ ಸಹಾಯಧನ ವ್ಯವಸ್ಥೆ ಕಲ್ಪಿಸಿ ಕೊಡಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಕೊಡಗು ಜಿಲ್ಲೆ ಘಟಕದ ಕಾರ್ಯದರ್ಶಿ ಎಂ.ಎ.ಅಬ್ದುಲ್ ರಜಾಕ್ ಆಗ್ರಹಿಸಿದರು.

ಹಲವಾರು ವರ್ಷಗಳಿಂದ ತೋಟದ ಲೈನ್ ಮನೆಗಳಲ್ಲಿ ವಾಸಿಸುತ್ತಿರುವ ಅರ್ಹ ಫಲಾನಿಭವಿಗಳಿಗೆ ಸರ್ಕಾರದ ವತಿಯಿಂದ ಆಶ್ರಯ ಅಂಬೇಡ್ಕರ್ ವಸತಿ ಯೋಜನೆ ಹಾಗು ಪಿ ಎಂ ಆವಾಸ್ ವಸತಿ ಯೋಜನೆ ಯಡಿಯಲ್ಲಿ ಮನೆಗಳನ್ನು ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಎಸ್‌ಡಿಟಿಯುನ ಜಿಲ್ಲಾ ಸಮಿತಿ ಸದಸ್ಯರಾದ ಅಲ್ತಾಫ್, ಸಾಜಿದ್ ಖಾನ್,ಅಜೀಜ್, ಇದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0