ದೆಹಲಿ ಪ್ರತಿಭಟನೆಗೆ ಬೆಂಬಲ: ವೀರಾಜಪೇಟೆಯಲ್ಲಿ DYFI ವತಿಯಿಂದ ಪ್ರತಿಭಟನೆ

Jul 25, 2026 - 13:14
 0  100
ದೆಹಲಿ ಪ್ರತಿಭಟನೆಗೆ ಬೆಂಬಲ: ವೀರಾಜಪೇಟೆಯಲ್ಲಿ DYFI ವತಿಯಿಂದ ಪ್ರತಿಭಟನೆ

ವೀರಾಜಪೇಟೆ: ದೆಹಲಿಯ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿ-ಯುವಜನರಿಗೆ ಐಕ್ಯತಾ ಬೆಂಬಲ ಸೂಚಿಸುತ್ತಾ ಡಿ.ವೈ.ಎಫ್.ಐ. (DYFI) ಕೊಡಗು ಜಿಲ್ಲಾ ಸಮಿತಿ ವತಿಯಿಂದ ವೀರಾಜಪೇಟೆ ಕ್ಲಾಕ್ ಟವರ್ ಮುಂದೆ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಯಿತು.

 ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ DYFI ಕೊಡಗು ಜಿಲ್ಲಾ ಖಜಾಂಜಿ ಸಾದಿಕ್ ಎ.ಎಚ್., ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವನ್ನು ಕೂಡಲೇ ನಿಲ್ಲಿಸಬೇಕು ಹಾಗೂ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ನೀಟ್ (NEET) ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು NEET ಪರೀಕ್ಷಾ ವ್ಯವಸ್ಥೆಯನ್ನು ರದ್ದುಪಡಿಸಬೇಕು ಎಂದು ಅವರು ಒತ್ತಾಯಿಸಿದರು.

ವಿದ್ಯಾರ್ಥಿಗಳ ಎಲ್ಲಾ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಈಡೇರಿಸಬೇಕು, ಮೃತರಾದ ವಿದ್ಯಾರ್ಥಿಗಳ ಕುಟುಂಬಗಳಿಗೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು.

ಈ ಪ್ರತಿಭಟನೆಯಲ್ಲಿ ಡಿವೈಎಫ್ಐ ಜಿಲ್ಲಾ ಮುಖಂಡರಾದ ಎನ್ ಕೆ ಅನಿಲ್ , ಕೆ ಎಸ್ ರತೀಶ್ , ಖಾಲಿದ್ ಆದಿವಾಸಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ರಮೇಶ್, ಮುಖಂಡರಾದ ಸೀತಾ, ಅಶೋಕ್, ಜನವಾಧಿ ಮಹಿಳಾ ಸಂಘಟನೆಯ ಜಿಲ್ಲಾ ಸಂಚಾಲಕರಾದ ಪದ್ಮಿನಿ ಶ್ರೀಧರ್ ಹಾಗೂ ಅಡ್ವೋಕೆಟ್ ಕೆ ವಿ ಸುನಿಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದುರು. ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0