T-20 ವರ್ಲ್ಡ್ ಕಪ್:ಸೂಪರ್ 8 ಮೊದಲ ಪಂದ್ಯದಲ್ಲಿ ಭಾರತಕ್ಕೆ ಸೋಲು
ಅಹ್ಮದಾಬಾದ್, ಫೆ.22: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ ನ ಸೂಪರ್ 8ರ ಭಾರತದ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವು 76 ರನ್ ಗಳ ಜಯಗಳಿಸಿದೆ.
ದಕ್ಷಿಣ ಆಫ್ರಿಕಾ ನೀಡಿದ 188 ರನ್ ಗಳ ಗುರಿ ಬೆನ್ನತ್ತಿದ ಭಾರತ ತಂಡವು 18.5 ಓವರ್ ಗಳಲ್ಲಿ 111 ರನ್ ಗಳಿಸಿ ಆಲೌಟ್ ಆಯಿತು. ಈ ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾ ತಂಡವು ಸೆಮಿಫೈನಲ್ ನತ್ತ ದೊಡ್ಡ ಹೆಜ್ಜೆ ಇಟ್ಟಿದೆ.