ಟಿ.ಶೆಟ್ಟಿಗೇರಿ:ಒಂದು ವಾರದಗೊಳಗೆ ವಿದ್ಯುತ್ ಮಾರ್ಗಗಳ ಮೇಲ್ದೆರ್ಜೆಗೇರಿಸುವ ಕಾಮಗಾರಿ ಪೂರ್ಣಗೊಳ್ಳುವ ಸಾಧ್ಯತೆ

ಟಿ.ಶೆಟ್ಟಿಗೇರಿ:ಒಂದು ವಾರದಗೊಳಗೆ ವಿದ್ಯುತ್ ಮಾರ್ಗಗಳ  ಮೇಲ್ದೆರ್ಜೆಗೇರಿಸುವ ಕಾಮಗಾರಿ ಪೂರ್ಣಗೊಳ್ಳುವ ಸಾಧ್ಯತೆ

ಪೊನ್ನಂಪೇಟೆ: ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲೂಕು ಟಿ.ಶೆಟ್ಟಿಗೇರಿಯಲ್ಲಿ, ನಾಲ್ಕು ದಿನಗಳ ಹಿಂದೆ, ₹ 1ಕೋಟಿ 60ಲಕ್ಷ ಅನುದಾನದಲ್ಲಿ ವಿದ್ಯುತ್ ಮಾರ್ಗಗಳನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ವಿರಾಜಪೇಟೆ ಕ್ಷೇತ್ರ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಭೂಮಿ ಪೂಜೆ ನೆರೆವೇರಿಸಿದ್ದರು. ಇದಾದ ಬೆನ್ನಲ್ಲೇ ಇಲಾಖೆಯು ಕಾಮಗಾರಿ ಕೈಗೆತ್ತಿಕೊಂಡಿದ್ದು, ನಾಲ್ಕು ದಿನಗಳಲ್ಲಿ ಅರ್ಧದಷ್ಟು ಕಾಮಗಾರಿ ಪೂರ್ಣಗೊಂಡಿದೆ. ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿದ ಬೆನ್ನಲ್ಲೇ, ಕಾಮಗಾರಿ ವೇಗ ಪಡೆದುಕೊಂಡು, ಇನ್ನು ಒಂದು ವಾರದೊಳಗೆ ಕಾಮಗಾರಿ ಮುಗಿಯುವ ಸಾಧ್ಯತೆ ಇದೆ.