ಜಿಲ್ಲಾ ಮಟ್ಟದ ಶ್ರೇಷ್ಠ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಟಿ.ಇ ಸುಲ್ಹತ್

ಮಡಿಕೇರಿ: ಮಾಜಿ ಪ್ರದಾನಮಂತ್ರಿ ರಾಜೀವ್ ಗಾಂಧಿ ಅವರ ಹೆಸರಿನಲ್ಲಿ ನೀಡಲಾಗುತ್ತಿರುವ ಜಿಲ್ಲಾ ಮಟ್ಟದ ಶ್ರೇಷ್ಠ ಶಿಕ್ಷಕಿ ಪ್ರಶಸ್ತಿಗೆ ಮಡಿಕೇರಿ ಎ.ಎಲ್.ಜಿ ಕ್ರೆಸೆಂಟ್ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಕನ್ನಡ ಶಿಕ್ಷಕಿ ಟಿ.ಇ ಸುಲ್ಹತ್ ಅವರು ಭಾಜನರಾಗಿದ್ದಾರೆ.ಶಿಕ್ಷಕ ದಿನಾಚರಣೆಯ ಪ್ರಯುಕ್ತ ಮಡಿಕೇರಿ ನಗರದ ಸಂತ ಜೋಸೆಫರ ಶಾಲೆಯಲ್ಲಿ ಶಾಸಕ ಡಾ.ಮಂತರ್ ಗೌಡ ಅವರು ಪ್ರಶಸ್ತಿ ನೀಡಿ ಗೌರವಿಸಿದರು.