ಅ.26ರಂದು ಮಡಿಕೇರಿಯಲ್ಲಿ ಬಂಟ ಸಮುದಾಯದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ
ಮಡಿಕೇರಿ: ಜಿಲ್ಲಾ ಬಂಟರ ಸಂಘದ ವತಿಯಿಂದ ಮಡಿಕೇರಿ ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಮಡಿಕೇರಿ ತಾಲೂಕು ಮಹಿಳಾ ಬಂಟರ ಸಂಘ, ಯೂತ್ ಬಂಟ್ಸ್ ಅಸೋಸಿಯೇಷನ್, ನಗರ ಬಂಟರ ಸಂಘ, ನಗರ ಮಹಿಳಾ ಬಂಟರ ಸಂಘ ವೀರಾಜಪೇಟೆ, ಸೋಮವಾರಪೇಟೆ, ಪೊನ್ನಂಪೇಟೆ ತಾಲೂಕು ಬಂಟರ ಸಂಘ, ವೀರಾಜಪೇಟೆ ತಾಲೂಕು ಮಹಿಳಾ ಬಂಟರ ಸಂಘಗಳ ಸಹಯೋಗದೊಂದಿಗೆ ಬಂಟ ಸಮುದಾಯದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಅ.೨೬ರಂದು ನಗರದ ಗಾಂಧಿಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಡಿಕೇರಿ ತಾಲೂಕು ಬಂಟರ ಸಂಘದ ಖಜಾಂಚಿ ದಿವೇಶ ರೈ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ ೯.೩೦ ಗಂಟೆಗೆ ಮಡಿಕೇರಿ ತಾಲೂಕು ಬಂಟರ ಸಂಘದ ಅಧ್ಯಕ್ಷ ಸದಾಶಿವ ರೈ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಚಲನಚಿತ್ರ ಹಾಗೂ ಕಿರುತೆರೆ ಕಲಾವಿದರಾದ ಸುರೇಶ್ ರೈ, ಭವ್ಯಶ್ರೀ ರೈ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಚಿತ್ತಾರ ವಾಹಿನಿಯ ಮುಖ್ಯಸ್ಥೆ ಸವಿತಾ ರೈ, ಜಿಲ್ಲಾ ಬಂಟರ ಭವನ ಟ್ರಸ್ಟ್‌ನ ಕಾರ್ಯದರ್ಶಿ ಸತೀಶ್ ರೈ, ಖಜಾಂಚಿ ಬಾಲಕೃಷ್ಣ ರೈ ಇತರರು ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ ೨.೩೦ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಕಾರ್ಯಕ್ರಮವನ್ನು ಪುತ್ತೂರು ವಿಧಾನಸಭಾ ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದಾರೆ. ಸದಾಶಿವ ರೈ, ಕೊಡಗು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ಬಿ.ಡಿ.ಜಗದೀಶ್ ರೈ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ತಾಲೂಕು ಬಂಟರ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಶಶಿಕಲಾ, ಮಡಿಕೇರಿ ತಾಲೂಕು ಬಂಟರ ಸಂಘದ ಅಧ್ಯಕ್ಷ ಸದಾಶಿವ ರೈ, ಗೌರವ ಸಲಹೆಗಾರ ಬಿ.ಸಿ.ಹರೀಶ್ ರೈ, ಸದಸ್ಯೆ ಸಾವಿತ್ರಿ ಇದ್ದರು.